ಅನಿಲ್ ಕುಮಾರ್ ನಿರ್ದೇಶನದ ಝೈದ್ ಖಾನ್ ಅಭಿನಯದ ಬಹುನಿರೀಕ್ಷಿತ ‘ಕಲ್ಟ್’ ಚಿತ್ರ ಈಗಾಗಲೇ ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇದೀಗ ನಾಯಕಿಯನ್ನು ಪರಿಚಯಿಸಲಾಗಿದೆ. ಝೈದ್ ಖಾನ್ ಅವರಿಗೆ ಜೋಡಿಯಾಗಿ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯಿಸುತ್ತಿದ್ದಾರೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದ್ದು, ರಚಿತಾ ರಾಮ್ ಅವರ ಪೋಸ್ಟರ್ ಒಂದನ್ನು ಅಪ್ಲೋಡ್ ಮಾಡುವ ಮೂಲಕ ಸ್ವಾಗತ ಕೋರಿದೆ.
ಆಕ್ಷನ್ ಥ್ರಿಲ್ಲರ್ ಕಥಾ ಹಂದರದ ಈ ಚಿತ್ರವನ್ನು ಆಶ್ರಿತ್ ಸಿನಿಮಾಸ್ ಸಂಸ್ಥೆ ನಿರ್ಮಾಣ ಮಾಡಿದ್ದು, ಅರ್ಜುನ್ ಜನ್ಯ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನ, ರವಿವರ್ಮ ಅವರ ಸಾಹಸ ನಿರ್ದೇಶನ, ಹಾಗೂ ಜೆ.ಎಸ್ ವಾಲಿ ಛಾಯಾಗ್ರಹಣವಿದೆ.