HomeEntertainmentಝೈದ್ ಖಾನ್ ನಟನೆಯ 'ಕಲ್ಟ್' ಚಿತ್ರಕ್ಕೆ ನಾಯಕಿಯಾದ ರಚಿತಾ ರಾಮ್

ಝೈದ್ ಖಾನ್ ನಟನೆಯ ‘ಕಲ್ಟ್’ ಚಿತ್ರಕ್ಕೆ ನಾಯಕಿಯಾದ ರಚಿತಾ ರಾಮ್

ಅನಿಲ್ ಕುಮಾರ್ ನಿರ್ದೇಶನದ ಝೈದ್ ಖಾನ್ ಅಭಿನಯದ ಬಹುನಿರೀಕ್ಷಿತ ‘ಕಲ್ಟ್’ ಚಿತ್ರ ಈಗಾಗಲೇ ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇದೀಗ ನಾಯಕಿಯನ್ನು ಪರಿಚಯಿಸಲಾಗಿದೆ. ಝೈದ್ ಖಾನ್ ಅವರಿಗೆ ಜೋಡಿಯಾಗಿ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯಿಸುತ್ತಿದ್ದಾರೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದ್ದು, ರಚಿತಾ ರಾಮ್ ಅವರ ಪೋಸ್ಟರ್ ಒಂದನ್ನು ಅಪ್ಲೋಡ್ ಮಾಡುವ ಮೂಲಕ ಸ್ವಾಗತ ಕೋರಿದೆ.

ಆಕ್ಷನ್ ಥ್ರಿಲ್ಲರ್ ಕಥಾ ಹಂದರದ ಈ ಚಿತ್ರವನ್ನು ಆಶ್ರಿತ್ ಸಿನಿಮಾಸ್ ಸಂಸ್ಥೆ ನಿರ್ಮಾಣ ಮಾಡಿದ್ದು, ಅರ್ಜುನ್ ಜನ್ಯ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನ, ರವಿವರ್ಮ ಅವರ ಸಾಹಸ ನಿರ್ದೇಶನ, ಹಾಗೂ ಜೆ.ಎಸ್ ವಾಲಿ ಛಾಯಾಗ್ರಹಣವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular