ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ (ರಾಬಕೊವಿ) ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ರಾಘವೇಂದ್ರ ಹಿಟ್ನಾಳ್ ಆಯ್ಕೆಯಾಗಿದ್ದಾರೆ.
ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಕೊಪ್ಪಳ ಶಾಸಜ ರಾಘವೇಂದ್ರ ಹಿಟ್ನಾಳ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಇಂದು ನಡೆದ ಒಕ್ಕೂಟದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಚುನಾವಣೆಯಲ್ಲಿ ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷರಾಗಿ ಆಯ್ಕೆಯಾಗಿದಾರೆ. ಉಪಾಧ್ಯಕ್ಷ ಸ್ಥಾನಕ್ಕೂ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಎನ್.ಸತ್ಯನಾರಾಯಣ ಅವರನ್ನು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯೂ ಆಗಿದ್ದ ಬಳ್ಳಾರಿ ಉಪವಿಭಾಗಾಧಿಕಾರಿ ಪ್ರಮೋದ್ ಘೋಷಿಸಿದ್ದಾರೆ.