HomeKarnatakaಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಬೆಂಬಲ

ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಬೆಂಬಲ

ಶಿವಮೊಗ್ಗ: ವಿಧಾನಪರಿಷತ್ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಬೆಂಬಲ ಸೂಚಿಸಿದ್ದಾರೆ.

ಸೋಮವಾರ ಶಿವಮೊಗ್ಗದಲ್ಲಿ ರಘುಪತಿ ಭಟ್ ಅವರ ಪದವೀಧರ ಸಂಪರ್ಕ ಕೇಂದ್ರವನ್ನು ಈಶ್ವರಪ್ಪ ಉದ್ಘಾಟಿಸಿ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಬಿಜೆಪಿ ಮುಖಂಡರು ಕೂಡ ರಘುಪತಿ ಭಟ್ ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ರಘುಪತಿ ಭಟ್ ಮಾತನಾಡಿ, ಮೂರು ಬಾರಿ ಶಾಸಕನಾಗಿದ್ದೆ. ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸಿದ್ದೆ. ವರಿಷ್ಠರು ಸ್ಪರ್ಧೆಗೆ ಅವಕಾಶ ನೀಡುವುದಾಗಿ ಹೇಳಿದ್ದರು. ಪರಿಷತ್ ಚುನಾವಣೆಯಲ್ಲಿ ಕರಾವಳಿ ಹಾಗೂ ಮಲೆನಾಡಿನವರಿಗೆ ತಲಾ ಒಂದೊಂದು ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ನೀಡುವ ಸಂಪ್ರದಾಯ ಬಿಜೆಪಿಯಲ್ಲಿ ಇತ್ತು. ಈ ಬಾರಿ ಸಂಪ್ರದಾಯ ಮುರಿಯಲಾಗಿದೆ. ನಾನು ಮೊದಲೇ ಹೇಳಿದಂತೆ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular