HomeKarnatakaರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಅವಧಿ ವಿಸ್ತರಣೆ

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಅವಧಿ ವಿಸ್ತರಣೆ

ಚಿತ್ರದುರ್ಗ: 2022-23ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದ ರೈತರಿಂದ ರಾಗಿ ಖರೀದಿ ಅವಧಿಯನ್ನು ಏಪ್ರಿಲ್ 30 ರವರೆಗೆ ವಿಸ್ತರಿಸಲಾಗಿದೆ.

ರಾಜ್ಯದ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರಾಗಿ ಖರೀದಿ ಪ್ರಕ್ರಿಯೆಯು ಇದೇ ಮಾರ್ಚ್ 31ಕ್ಕೆ ಮುಕ್ತಾಯಗೊಳ್ಳಬೇಕಾಗಿರುತ್ತದೆ. ಆದರೆ ಕೇಂದ್ರ ಸರ್ಕಾರವು ನಿಗದಿಪಡಿಸಿರುವ ಗುರಿಯನ್ನು ತಲುಪದೇ ಇರುವ ಕಾರಣ ಕೇಂದ್ರ ಸರ್ಕಾರವು ರಾಜ್ಯದ ರೈತರ ಹಿತದೃಷ್ಠಿಯಿಂದ ಈಗಾಗಲೇ ರಾಗಿಯನ್ನು ಮಾರಾಟ ಮಾಡಲು ನೋಂದಣಿ ಮಾಡಿಕೊಂಡಿರುವ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಯ ಅವಧಿಯನ್ನು ಏಪ್ರಿಲ್ 30 ರವರೆಗೆ ವಿಸ್ತರಿಸಿದೆ ಹಾಗೂ ರಾಗಿ ಖರೀದಿ ಕಾರ್ಯವನ್ನು ಏಪ್ರಿಲ್ 30 ರೊಳಗಾಗಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈತಭಾಂದವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular