ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ, ಜೋಳ ಖರೀದಿ ಅವಧಿ ವಿಸ್ತರಣೆ

2023-24 ನೇ ಸಾಲಿನಲ್ಲಿ ಬೆಳೆದ ರಾಗಿ ಮತ್ತು ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ನೇರವಾಗಿ ಖರೀದಿಸಲಾಗುವುದು.

ರಾಜ್ಯದಲ್ಲಿ ಇನ್ನು 3 ಲಕ್ಷ ಮೆ.ಟನ್ ಜೋಳವನ್ನು ಹಾಗೂ 5,99,392 ಮೆ.ಟನ್ ರಾಗಿಯನ್ನು ರೈತರಿಂದ ಖರೀದಿಸಲು ಸರ್ಕಾರ ಮುಂದಾಗಿದೆ. ಖರೀದಿ ಪ್ರಕ್ರಿಯೆಯಲ್ಲಿ ಖರೀದಿ ಮಿತಿಯು ಪ್ರತಿ ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಲ್ ನಂತೆ ಗರಿಷ್ಠ 20 ಕ್ವಿಂಟಾಲ್ ಗರಿಷ್ಠ ಮಿತಿ ಇದೆ.

ರಾಗಿ, ಜೋಳ ಖರೀದಿಸಲು ಬಳ್ಳಾರಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ತೀರ್ಮಾನಿಸಿದ್ದು, ಜಿಲ್ಲೆಯ ರೈತರು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ನೋಂದಣಿ ಮತ್ತು ಖರೀದಿ ಅವಧಿ:

2023-24 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಬಳ್ಳಾರಿ ಜಿಲ್ಲೆಯಲ್ಲಿ ಖರೀದಿಸಲು ತೀರ್ಮಾನಿಸಿರುವ ಕೃಷಿ ಉತ್ಪನ್ನ, ರೈತರ ನೋಂದಣಿ, ಖರೀದಿ ಪ್ರಾರಂಭದ ದಿನದ ವಿವರ ಇಂತಿದೆ.

ಮುಂಗಾರು/ಹಿಂಗಾರು  ಋತುವಿನ ಖರೀದಿಸುವ ಕೃಷಿ ಉತ್ಪನ್ನಗಳು: ರಾಗಿ, ಜೋಳ.

ಮುಂಗಾರು/ಹಿಂಗಾರು ಋತುವಿನ ರೈತರ ನೋಂದಣಿ ಅವಧಿ: ಮಾ.31 ರವರೆಗೆ.

ಖರೀದಿ ಪ್ರಾರಂಭ ಮತ್ತು ಮುಕ್ತಾಯದ ದಿನಾಂಕ: ಏ.1 ರಿಂದ ಜೂನ್ 30 ರವರೆಗೆ.

2023-24 ನೇ ಸಾಲಿನ ಬೆಂಬಲ ಬೆಲೆ ಯೋಜನೆ ಕಾರ್ಯಾಚರಣೆಯನ್ನು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿಯಾಗಿ ನೇಮಿಸಿದೆ. ಕೇಂದ್ರ ಸರ್ಕಾರವು ನಿಗಧಿಪಡಿಸಿದ ಗುರಿ ತಲುಪದೇ ಇರುವುದರಿಂದ ರಾಗಿ, ಜೋಳ ಖರೀದಿಯನ್ನು ಜೂನ್ 30 ರವರೆಗೆ ವಿಸ್ತರಿಸಿ ಆದೇಶಿಸಿದೆ ಎಂದು ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read