HomeAgricultureರೈತರಿಗೆ ಗುಡ್ ನ್ಯೂಸ್: 4290 ರೂ. ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗೆ ನೋಂದಣಿ: ಭತ್ತಕ್ಕೆ...

ರೈತರಿಗೆ ಗುಡ್ ನ್ಯೂಸ್: 4290 ರೂ. ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗೆ ನೋಂದಣಿ: ಭತ್ತಕ್ಕೆ 2300 ರೂ. ನಿಗದಿ

ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಸಾಮಾನ್ಯ ಪ್ರತಿ ಕ್ವಿಂಟಾಲ್ 2300 ರೂ. ಹಾಗೂ ಎ ಗ್ರೇಡ್ ಪ್ರತಿ ಕ್ವಿಂಟಾಲ್‍ಗೆ 2320 ರೂ. ರಂತೆ ಹಾಗೂ ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂ.ರಂತೆ ಖರೀದಿಸಲು ತಾಲ್ಲೂಕು ಕೇಂದ್ರಗಳಲ್ಲಿ ನೋಂದಣಿ ಕೇಂದ್ರ ತೆರೆಯಲಾಗಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಅಧ್ಯಕ್ಷ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದ್ದಾರೆ.

 ನೋಂದಣಿ ಕೇಂದ್ರಗಳು;

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ದಾವಣಗೆರೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಹೊನ್ನಾಳಿ,  ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಜಗಳೂರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಹರಿಹರ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಚನ್ನಗಿರಿ ಇಲ್ಲಿ ಕೃಷಿ ಇಲಾಖೆಯವರು ಸಿದ್ಧಪಡಿಸಿದ ಫ್ರೂಟ್ ತಂತ್ರಾಂಶದಲ್ಲಿ ನಮೂದಿಸಿರುವ ಬೆಳೆಯ ಆಧಾರದ ಮೇಲೆ ರೈತರ ಹೆಸರನ್ನು ನೋಂದಾಯಿಸಿಕೊಳ್ಳಲಾಗುವುದು. ಒಂದು ವೇಳೆ ಫ್ರೂಟ್ ತಂತ್ರಾಂಶದಲ್ಲಿ ತೊಂದರೆ ಇದ್ದಲ್ಲಿ ಹತ್ತಿರವಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ತಂತ್ರಾಂಶದಲ್ಲಿ ಸರಿಪಡಿಸಿಕೊಂಡು ನೋಂದಣಿ ಮಾಡಿಕೊಳ್ಳಲು ತಿಳಿಸಿದೆ. ನೋಂದಣಿ ಆರಂಭವಾಗಿದ್ದು 2025 ರ ಜನವರಿಯಿಂದ ಮಾರ್ಚ್ ಅಂತ್ಯದವರೆಗೆ ಖರೀದಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈತರು ಕೃಷಿ ಇಲಾಖೆ ನೀಡಿರುವ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ ಫ್ರೂಟ್ ಣೋಂದಣಿ ಕೇಂದ್ರಕ್ಕೆ ಬಂದು ಬಯೋಮೆಟ್ರಿಕ್ ಸಾಧನದ ಮುಖಾಂತರ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಫ್ರೂಟ್ಸ್ ದತ್ತಾಂಶದಲ್ಲಿ ರೈತರು ನೀಡಿರುವ ಬ್ಯಾಂಕ್ ಖಾತೆಗೆ ಡಿಬಿಟಿ ಮುಖಾಂತರ ನೇರವಾಗಿ ರೈತರ ಖಾತೆಗೆ ಹಣ ಸಂದಾಯ ಮಾಡಲಾಗುವುದು. ಆದ್ದರಿಂದ ರೈತರು ಬ್ಯಾಂಕ್ ಖಾತೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಆಗಿರುವುದನ್ನು ಮತ್ತು ಎನ್‍ಪಿಸಿಎಲ್ ಮ್ಯಾಪಿಂಗ್ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಖರೀದಿ ಕೇಂದ್ರಕ್ಕೆ ಆಧಾರ್ ಕಾರ್ಡ್, ಪಹಣಿ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯನ್ನು ನೀಡಬೇಕು.

ರೈತರು ತಾವು ನೀಡುವ ಎಲ್ಲಾ ದಾಖಲಾತಿಗಳಲ್ಲಿಯೂ ಒಂದೇ ಹೆಸರು ನಮೂದಾಗಿರತಕ್ಕದ್ದು, ಮತ್ತು ರಾಗಿ ತಂದು ಖರೀದಿ ಕೇಂದ್ರದಲ್ಲಿ ರಾಶಿ ಹಾಕಬೇಕು. ರಾಗಿ ಗುಣಮಟ್ಟ ಪರಿಶೀಲಿಸಲು ನೇಮಿಸಲ್ಪಟ್ಟ ಗ್ರೇಡರ್ಸ್ ದಾಸ್ತಾನಿನ ಗುಣಮಟ್ಟವನ್ನು ಪರಿಶೀಲಿಸಿ ಉತ್ತಮ ಗುಣಮಟ್ಟವೆಂದು ಧೃಢಪಟ್ಟರೆ ಮಾತ್ರ ಖರೀದಿಸಲಾಗುವುದು. ಗುಣಮಟ್ಟ ಸರಿಯಿಲ್ಲವೆಂದು ದೃಢಪಡಿಸಿದ್ದಲ್ಲಿ ರೈತರು ತಮ್ಮ ಸ್ವಂತ ಖರ್ಚಿನಿಂದ ಹಿಂದಕ್ಕೆ ತೆಗೆದುಕೊಂಡು ಹೋಗಬೇಕು.

ಪ್ರತಿ ರೈತರಿಂದ ಪ್ರತಿ ಎಕರೆಗೆ ರಾಗಿ 10 ಕ್ವಿಂಟಾಲ್ ನಂತೆ ಗರಿಷ್ಠ 20 ಕ್ವಿಂಟಾಲ್ ರಾಗಿಯನ್ನು ಮತ್ತು ರೈತರಿಂದ ಭತ್ತವನ್ನು ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಗರಿಷ್ಟ 50 ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುವುದು.  ಖರೀದಿಗೆ ಸಂಬಂಧಿಸಿದ ಯಾವುದೇ ದೂರುಗಳಿದ್ದಲ್ಲಿ ತಹಶೀಲ್ದಾರರು, ಉಪವಿಭಾಗಾಧಿಕಾರಿ, ಜಂಟಿ ನಿರ್ದೇಶಕರು(ಆಹಾರ), ಹಾಗೂ ಕೃಷಿ ಮಾರುಕಟ್ಟೆ ಅಧಿಕಾರಿಗಳ ಗಮನಕ್ಕೆ ತರಬಹುದು. ಅಥವಾ ದೂರವಾಣಿ ಸಂಖ್ಯೆ -08192-296770 ಗೆ ಕರೆಮಾಡಬಹುದು ಎಂದು ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular