ಹೈದರಾಬಾದ್: ಕಾಲೇಜಿನಲ್ಲಿ ವಿದ್ಯಾರ್ಥಿಗಳ ರ‍್ಯಾಗಿಂಗ್ ಪ್ರಕರಣಗಳು ಹೆಚ್ಚುತ್ತಿವೆ. ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಯೊಬ್ಬನನ್ನು ಮನಬಂದಂತೆ ಥಳಿಸಿ ಕರೆಂಟ್ ಶಾಕ್ ಕೊಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ.
ಆಂಧ್ರಪ್ರದೇಶದ ಪಲನಾಡಿನ ಕಾಲೇಜೊಂದರಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗೆ ರ‍್ಯಾಗಿಂಗ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ರೂಮಿಗೆ ಹೋಗಿ ಯುವಕರ ಗುಂಪೊಂದು ಬಾಲಕನೊಬ್ಬನಿಗೆ ಹೊಡೆದಿದ್ದಾರೆ. ಆತ ಕೈಮುಗಿದು ಕೇಳಿದರೂ ಬಿಟ್ಟಿಲ್ಲ. ಬಳಿ ನೆಲಕ್ಕೆ ಕೂರಿಸಿ ಕರೆಂಟ್ ಶಾಕ್ ನೀಡಿ ಚಿತ್ರಹಿಂಸೆ ಕೊಟ್ಟಿದ್ದಾರೆ.
ಕಾಲೇಜಿನ ಎರಡನೇ ವರ್ಷದ ವಿದ್ಯಾರ್ಥಿಗಳು ಬಾಲಕನನ್ನು ಹಾಸ್ಟೆಲ್ ಗೆ ಕರೆದೊಯ್ದು ಹಿಂಸಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿ ಮೇಲೆ ರ‍್ಯಾಗ್ ಮಾಡಿರುವ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಗಳು ಕೇಳಿಬಂದಿವೆ.