HomeEntertainmentBIG NEWS: ನಟಿ ರಾಗಿಣಿಗೆ ಬಿಗ್ ರಿಲೀಫ್: ಡ್ರಗ್ಸ್ ಸರಬರಾಜು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

BIG NEWS: ನಟಿ ರಾಗಿಣಿಗೆ ಬಿಗ್ ರಿಲೀಫ್: ಡ್ರಗ್ಸ್ ಸರಬರಾಜು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಮಾದಕವಸ್ತು ಸರಬರಾಜು ಮಾಡಿ ಅಕ್ರಮವಾಗಿ ಹಣ ಗಳಿಕೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ಕಾಟನ್ ಪೇಟೆ ಠಾಣೆಯಲ್ಲಿ ನಟಿ ರಾಗಿಣಿ ದ್ವಿವೇದಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ರಾಗಿಣಿ ದ್ವಿವೇದಿ ಹಾಗೂ ಪ್ರಶಾಂತ್ ರಂಕ ವಿರುದ್ಧ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ರದ್ದು ಕೋರಿ ರಾಗಿಣಿ ದ್ವಿವೇದಿ ಹಾಗೂ ಪ್ರಶಾಂತ್ ರಂಕ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಚಂದನಗೌಡರ ಅವರಿದ್ದ ಪೀಠ, ಪ್ರಕರಾ ರದ್ದು ಮಾಡಿ ಆದೇಶ ಹೊರಡಿಸಿದೆ. ಆರೋಪಪಟ್ಟಿಯಲ್ಲಿ ಸಾಕ್ಷಾಧಾರಗಳು ಹಾಗೂ ಇತರೆ ಆರೋಪಿಗಳ ಹೇಳಿಕೆಗಳನ್ನು ಹೊರತುಪಡಿಸಿದರೆ ಅರ್ಜಿದಾರರು ಪಾರ್ಟಿಗಳನ್ನು ಆಯೋಜನೆ ಮಾಡುವುದು ಅಥವಾ ಮಾದಕ ವಸ್ತುಗಳನ್ನು ಮಾರಾಟ ಮಾಡುವುದಕ್ಕೆ ಸಂಬಂಧಿಸಿದಂತೆ ತನಿಖಾಧಿಕರಿಗಳು ಯಾವುದೇ ಸಾಕ್ಷಾಧಾರಗಳನ್ನು ಒದಗಿಸಿಲ್ಲ. ಹೀಗಾಗಿ ಅರ್ಜಿದಾರರ ವಿರುದ್ಧ ಕ್ರಿಮಿನಲ್ ವಿಚಾರಣೆ ಮುಂದುವರೆಸುವುದು ಕಾನೂನು ದುರ್ಬಳಕೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular