HomeIndiaತಮಿಳುನಾಡು ಚುನಾವಣೆ: 27+1 ಸೀಟು ಹಂಚಿಕೆ ಸೂತ್ರಕ್ಕೆ ರಾಹುಲ್ ಗಾಂಧಿ ಒಪ್ಪಿಗೆ

ತಮಿಳುನಾಡು ಚುನಾವಣೆ: 27+1 ಸೀಟು ಹಂಚಿಕೆ ಸೂತ್ರಕ್ಕೆ ರಾಹುಲ್ ಗಾಂಧಿ ಒಪ್ಪಿಗೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಮಿಳುನಾಡು ವಿಧಾನಸಭಾ ಚುನಾವಣೆ 2026ಕ್ಕೆ ಡಿಎಂಕೆಯೊಂದಿಗಿನ ಸೀಟು ಹಂಚಿಕೆ ಸೂತ್ರಕ್ಕೆ ಒಪ್ಪಿಗೆ ನೀಡಿದ್ದಾರೆ. ಮೈತ್ರಿ ಮತ್ತು ಸೀಟು ಹಂಚಿಕೆ ಕುರಿತು ರಾಹುಲ್ ಗಾಂಧಿ ಒಪ್ಪಿಗೆ ನೀಡಿದ್ದು, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಈ ಕುರಿತು ಮುಂದುವರೆಯುವಂತೆ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಒಪ್ಪಿಗೆ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಅವರಿಗೆ ಈ ಮೈತ್ರಿ ಒಪ್ಪಂದವನ್ನು ಅಂತಿಮಗೊಳಿಸಿ, ಚುನಾವಣಾ ಸಿದ್ಧತೆ ಪ್ರಾರಂಭಿಸುವಂತೆ ಸೂಚಿಸಿದ್ದಾರೆ.

ಕಾಂಗ್ರೆಸ್-ಡಿಎಂಕೆ ಮೈತ್ರಿಯ ಸೀಟು ಹಂಚಿಕೆ ಮಾತುಕತೆ ಕೆಲವು ದಿನಗಳಿಂದ ನಡೆಯುತ್ತಿತ್ತು. ಡಿಎಂಕೆಯು ಆರಂಭದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ ನೀಡಲು ನಿರಾಕರಿಸಿತ್ತು. ಆದರೆ ಈಗ ಉಭಯ ಪಕ್ಷಗಳ ನಡುವಿನ ಸೀಟು ಹಂಚಿಕೆ ಅಂತಿಮಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಷ್ಟು ಸೀಟುಗಳು?: ಡಿಎಂಕೆ ಕಾಂಗ್ರೆಸ್ ಪಕ್ಷಕ್ಕೆ 27 + 1 ಸೀಟು ಹಂಚಿಕೆ ಸೂತ್ರವನ್ನು ಕೊಟ್ಟಿದೆ. 27 ವಿಧಾನಸಭಾ ಕ್ಷೇತ್ರಗಳನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲಾಗುತ್ತದೆ. 1 ರಾಜ್ಯಸಭೆ ಸೀಟು ಕಾಂಗ್ರೆಸ್‌ಗೆ ಸಿಗಲಿದೆ. ಮುಂದಿನ ದಿನಗಳಲ್ಲಿ ಇನ್ನೂ 1 ವಿಧಾನಸಭಾ ಕ್ಷೇತ್ರ ನೀಡಲು ಡಿಎಂಕೆ ಒಪ್ಪಿದ್ದು, 28ಕ್ಕಿಂತ ಹೆಚ್ಚಿನ ಸೀಟು ನೀಡುವುದಿಲ್ಲ ಎಂದು ಹೇಳಿದೆ.

ಕಾಂಗ್ರೆಸ್ ಪಕ್ಷಕ್ಕೆ ಮಾರ್ಚ್ 4ಕ್ಕೆ ಅಂತಿಮ ನಿಲುವು ತಿಳಿಸಬೇಕು ಎಂದು ಡಿಎಂಕೆ ಸೂಚನೆ ನೀಡಿತ್ತು. ಆದ್ದರಿಂದ ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಡಿಎಂಕೆ ಸಂಸದೆ ಕನ್ನಿಮೋಳಿ ಅವರನ್ನು ಮಂಗಳವಾರ ಸಂಜೆ ಭೇಟಿಯಾಗಿದ್ದರು.

ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಸೂಚನೆಯಂತೆ ಪಿ. ಚಿದಂಬರಂ ಡಿಎಂಕೆ ಮುಖ್ಯಸ್ಥ ಎಂ.ಸ್ಟಾಲಿನ್ ಜೊತೆ ಮಾತುಕತೆ ನಡೆಸಿ ಕಾಂಗ್ರೆಸ್-ಡಿಎಂಕೆ ಸೀಟು ಹಂಚಿಕೆ ಅಂತಿಮಗೊಳಿಸಿದ್ದಾರೆ.

ಮಾರ್ಚ್ 10ರ ಬಳಿಕ ತಮಿಳುನಾಡು ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ. ತಮಿಳುನಾಡು ವಿಧಾನಸಭೆ ಬಲ 234 ಸ್ಥಾನಗಳು. ಡಿಎಂಕೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದು, ಎಂ.ಕೆ.ಸ್ಟಾಲಿನ್ ಮುಖ್ಯಮಂತ್ರಿ.

ದ್ರಾವಿಡ ಮುನ್ನೇಟ್ರಾ ಕಳಗಂ (ಡಿಎಂಕೆ) ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ (ಎಸ್‌ಪಿಎ) ಮೈತ್ರಿಕೂಟದಲ್ಲಿ ಕಾಂಗ್ರೆಸ್, ಭಾರತೀಯ ಕಮ್ಯುನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ (CPI-M) ಭಾರತೀಯ ಕಮ್ಯುನಿಸ್ಟ್ ಪಕ್ಷ (CPI) ಮತ್ತು ವಿಡುದಲೈ ಚಿರುತ್ತೈಗಳ್ ಕಚ್ಚಿ (VCK) ಪಕ್ಷಗಳಿವೆ.

ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟ, ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷಗಳು ಡಿಎಂಕೆ ಮೈತ್ರಿಕೂಟಕ್ಕೆ ಚುನಾವಣೆಯಲ್ಲಿ ಎದುರಾಳಿಗಳು. ಈ ಬಾರಿಯು ಗೆದ್ದು ಪುನಃ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿ ಡಿಎಂಕೆ ಇದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular