ಬೆಂಗಳೂರು : ದೆಹಲಿಯಿಂದ ಬೆಂಗಳೂರಿಗೆ ರಾಹುಲ್ ಗಾಂಧಿ ಆಗಮಿಸಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತ ಕೋರಿದ್ದಾರೆ.
ದೆಹಲಿಯಿಂದ ಬೆಂಗಳೂರು HAL ಏರ್ ಪೋರ್ಟ್ ಗೆ ಬಂದಿಳಿದ ರಾಹುಲ್ ಗಾಂಧಿಗೆ ಕಾಂಗ್ರೆಸ್ ನಾಯಕರು ಸ್ವಾಗತ ಕೋರಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕರ ಜೊತೆ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ಬೆಂಗಳೂರಲ್ಲಿ ಇಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಹಲವೆಡೆ ವಾಹನ ಸಂಚಾರ ನಿಷೇಧಿಸಲಾಗಿದೆ. ಹಾಗೂ ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಇಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ನಡೆಸಲಿದೆ. ಈ ಸಮಾವೇಶಕ್ಕೆ ವೋಟ್ ಅಧಿಕಾರ್ ರ್ಯಾಲಿ ಎಂದು ಹೆಸರಿಸಲಾಗಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ತೀವ್ರ ಆರೋಪ ಮಾಡಿದ್ದಾರೆ. ಈ ಸಂಬಂಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.