HomeKarnatakaರಾಜ್ಯದಲ್ಲಿ ಇಂದು ರಾಹುಲ್ ಗಾಂಧಿ ಚುನಾವಣಾ ರಣಕಹಳೆ: ಬೀದರ್ ನಲ್ಲಿ ಕಾಂಗ್ರೆಸ್ ಪರ ಪ್ರಚಾರ

ರಾಜ್ಯದಲ್ಲಿ ಇಂದು ರಾಹುಲ್ ಗಾಂಧಿ ಚುನಾವಣಾ ರಣಕಹಳೆ: ಬೀದರ್ ನಲ್ಲಿ ಕಾಂಗ್ರೆಸ್ ಪರ ಪ್ರಚಾರ

ಬೆಂಗಳೂರು: ಕೋಲಾರದಲ್ಲಿ ನಿನ್ನೆ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೀದರ್ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಬೀದರ್ ಜಿಲ್ಲೆಯ ಭಾಲ್ಕಿ ಮತ್ತು ಹುಮನಾಬಾದ್ ಗೆ ರಾಹುಲ್ ಗಾಂಧಿ ಆಗಮಿಸಲಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತು ರಾಜಶೇಖರ ಪಾಟೀಲ್ ಅವರ ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿರುತ್ತಾರೆ. ಇದಕ್ಕೆ ಮೊದಲು ನಡೆಯುವ ಪಕ್ಷದ ಬೃಹತ್ ಸಮಾವೇಶದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗ್ಗೆ 11:30ಕ್ಕೆ ಭಾಲ್ಕಿಗೆ ಆಗಮಿಸಲಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಪರ ಪ್ರಚಾರ ನಡೆಸಲಿದ್ದಾರೆ. ನಂತರ ಬಾಲ್ಕಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಈಶ್ವರ ಖಂಡ್ರೆ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹುಮನಾಬಾದ್ ನಲ್ಲಿ ಆಯೋಜಿಸಿರುವ ಬೃಹತ್ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿರುವ ರಾಹುಲ್ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಪಾಟೀಲ್ ನಾಮಪತ್ರ ಸಲ್ಲಿಸುವ ವೇಳೆ ಉಪಸ್ಥಿತರಿರುತ್ತಾರೆ. ರಾಹುಲ್ ಗಾಂಧಿ ಅವರೊಂದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮೊದಲಾದ ನಾಯಕರು ಭಾಗವಹಿಸುವರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular