HomeIndiaರಾಹುಲ್ ಗಾಂಧಿ ಅನರ್ಹತೆ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ರಾಹುಲ್ ಗಾಂಧಿ ಅನರ್ಹತೆ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವ ಕುರಿತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಕ್ರಮದ ವಿರುದ್ಧ ರಾಷ್ಟ್ರವ್ಯಾಪಿ ಆಂದೋಲನ ನಡೆಸುವುದಾಗಿ ಕಾಂಗ್ರೆಸ್ ಹೇಳಿದೆ.

ಭಾರತದ ಧ್ವನಿಗಾಗಿ ಎಷ್ಟೇ ಬೆಲೆ ತೆರಬೇಕಾದರೂ ತನ್ನ ಹೋರಾಟವನ್ನು ಮುಂದುವರಿಸುವುದಾಗಿ ರಾಹುಲ್ ಗಾಂಧಿ ಹೇಳಿದ ಬೆನ್ನಲ್ಲೇ ಇಂತಹ ಹೇಳಿಕೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಪಕ್ಷದ ಹಿರಿಯ ನಾಯಕ ಸಭೆಯಲ್ಲಿ ದೇಶಾದ್ಯಂತ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

ಕಾಂಗ್ರೆಸ್ ಹಿರಿಯ ನಾಯಕ ಅಭಿಷೇಕ್ ಸಿಂಘ್ವಿ, ಈ ಕ್ರಮ ಬಿಜೆಪಿಯ ರಾಜಕೀಯ ದ್ವೇಷವಲ್ಲದೆ ಮತ್ತೇನೂ ಅಲ್ಲ ಎಂದು ಹೇಳಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular