ತುಮಕೂರು, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿಂದು ರಾಹುಲ್ ಗಾಂಧಿ ಪ್ರಚಾರ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ವಿಧಾನಸಭೆ ಚುನಾವಣೆ ಪ್ರಚಾರ ಕೈಗೊಂಡಿದ್ದಾರೆ. ರಾಜ್ಯಕ್ಕೆ ಮತ್ತೆ ಆಗಮಿಸಲಿರುವ ರಾಹುಲ್ ಗಾಂಧಿ ತುಮಕೂರು, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಬಿರುಸಿನ ಪ್ರಚಾರ ನಡೆಸಲಿದ್ದಾರೆ.

ಬೆಳಗ್ಗೆ 11:30ಕ್ಕೆ ತುಮಕೂರಿನ ತುರುವೇಕೆರೆಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1.15 ಕ್ಕೆ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ.

ಸಂಜೆ 4 ಗಂಟೆಗೆ ಚಾಮರಾಜನಗರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೊಂದಿಗೆ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read