ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರೈತರ ಸಾಲ ಮನ್ನಾ; ಮಹಿಳೆಯರಿಗೆ 1 ಲಕ್ಷದ 24 ಸಾವಿರ ಹಣ; ದೇಶಾದ್ಯಂತ ಗ್ಯಾರಂಟಿ ಯೋಜನೆ ಜಾರಿ; ರಾಹುಲ್ ಗಾಂಧಿ ಘೋಷಣೆ

ಮಂಡ್ಯ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭರ್ಜರಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ. ಕಾಂಗ್ರೆಸ್ ಅಧಿಕರಕ್ಕೆ ಬಂದ್ರೆ ದೇಶಾದ್ಯಂತ ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕರಕ್ಕೆ ಬಂದ್ರೆ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ. ದೇಶಾದ್ಯಂತ ಗ್ಯಾರಂಟಿ ಯೋಜನೆಗಳನ್ನು ವಿಸ್ತರಿಸಲಾಗುವುದು. ಮಹಿಳೆಯರಿಗೆ ಗೃಹ ಲಕ್ಷ್ಮೀ ಜೊತೆಗೆ ಮಹಾಲಕ್ಷ್ಮೀ ಯೋಜನೆ ಜಾರಿ ಮಾಡುವುದಾಗಿ ತಿಳಿಸಿದರು.

ಈ ಯೋಜನೆಯಡಿಯಲ್ಲಿ ಮಹಿಳೆಯರ ಖಾತೆಗೆ ವರ್ಷಕ್ಕೆ ಕೇಂದ್ರ ಸರ್ಕಾರದಿಂದ 1 ಲಕ್ಷ, ರಾಜ್ಯದಿಂದ 24 ಸಾವಿರ ರೂಪಾಯಿ ಹಣ ಜಮೆ ಆಗಲಿದೆ ಎಂದರು. ಇನ್ನು ನಿರುದ್ಯೋಗಿಗಳಿಗೆ ಐತಿಹಾಸಿಕ ಕಾರ್ಯಕ್ರಮ ನೀಡುತೇವೆ. ಪದವಿ ಮುಗಿಸಿದ ಯುವಕರಿಗೆ ಕೆಲಸ ಕೊಡುತ್ತೇವೆ. ವೇತನ ಸಹಿತ ತರಬೇತಿ ನೀಡಲಾಗುವುದು. ಮಾಸಿಕ 8,500 ರೂಪಾಯಿ ಜೊತೆಗೆ ತರಬೇತಿ ನಿದಿ ಕೆಲಸ ನೀಡುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read