HomeIndiaಮೋದಿ ಸರ್ ನೇಮ್ ಪ್ರಕರಣದಲ್ಲಿ ಜೈಲು ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ರಾಹುಲ್ ಗಾಂಧಿ

ಮೋದಿ ಸರ್ ನೇಮ್ ಪ್ರಕರಣದಲ್ಲಿ ಜೈಲು ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ರಾಹುಲ್ ಗಾಂಧಿ

‘ಮೋದಿ ಸರ್ ನೇಮ್’ ಪ್ರಕರಣದಲ್ಲಿ ಜೈಲು ಶಿಕ್ಷೆ ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ದೋಷಾರೋಪಣೆ ವಿರಾಮಗೊಳಿಸಬೇಕೆಂಬ ತನ್ನ ಮನವಿಯನ್ನು ಕೆಳ ನ್ಯಾಯಾಲಯ ತಿರಸ್ಕರಿಸಿದ ನಂತರ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾದ ನಂತರ ರಾಹುಲ್ ಗಾಂಧಿ ಅವರನ್ನು ಕಳೆದ ತಿಂಗಳು ಲೋಕಸಭೆಯಿಂದ ಅನರ್ಹಗೊಳಿಸಲಾಗಿತ್ತು. ಇದಕ್ಕಾಗಿ ಶನಿವಾರ ರಾಹುಲ್ ಗಾಂಧಿ ತಮ್ಮ ಅಧಿಕೃತ ಬಂಗಲೆಯನ್ನೂ ಖಾಲಿ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2019 ರಲ್ಲಿ ಕರ್ನಾಟಕದ ಕೋಲಾರದಲ್ಲಿ ಮೋದಿ ಸರ್ ನೇಮ್ ಕುರಿತಾದ ಹೇಳಿಕೆಗಾಗಿ ಸೂರತ್ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಶಿಕ್ಷೆಯನ್ನು ವಿಧಿಸಿದ ನಂತರ ರಾಹುಲ್ ಅವರನ್ನು ಸಂಸತ್ ನಿಂದ ಅನರ್ಹಗೊಳಿಸಲಾಯಿತು. ಅವರು ಮ್ಯಾಜಿಸ್ಟ್ರೇಟ್ ಆದೇಶದ ವಿರುದ್ಧ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಅವರ ಮನವಿಯನ್ನು ತಿರಸ್ಕರಿಸಲಾಯಿತು.

ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವನ್ನಾಗಿ ಮಾಡಿಕೊಂಡರೆ ಹೇಗೆ? ಎಂದು ಏಪ್ರಿಲ್ 13, 2019 ರಂದು ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ್ಯಾಲಿಯಲ್ಲಿ ನೀಡಿದ ಅವರ ಹೇಳಿಕೆಯ ಮೇಲೆ ಕ್ರಿಮಿನಲ್ ಮಾನನಷ್ಟಕ್ಕಾಗಿ ಅವರನ್ನು ಅಪರಾಧಿ ಎಂದು ಪರಿಗಣಿಸುವ ಸಂದರ್ಭದಲ್ಲಿ ಕೆಳ ನ್ಯಾಯಾಲಯವು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular