HomeKarnatakaBREAKING NEWS: ಕರುನಾಡ ಕುರುಕ್ಷೇತ್ರಕ್ಕೆ ರಾಹುಲ್ ಗಾಂಧಿ ಎಂಟ್ರಿ; ಮಂಡ್ಯಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ

BREAKING NEWS: ಕರುನಾಡ ಕುರುಕ್ಷೇತ್ರಕ್ಕೆ ರಾಹುಲ್ ಗಾಂಧಿ ಎಂಟ್ರಿ; ಮಂಡ್ಯಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ

ಮಂಡ್ಯ: ಲೋಕಸಭಾ ಚುನಾವಣಾ ಅಖಾಡ ರಂಗೇರಿದ್ದು, ಕರುನಾಡ ಕುರುಕ್ಷೇತ್ರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಂಟ್ರಿ ಕೊಟ್ಟಿದ್ದಾರೆ.

ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ ಗಾಂಧಿ ವಿಶೇಷ ವಿಮಾನದ ಮೂಲಕ ಮಂಡ್ಯಕ್ಕೆ ಆಗಮಿಸಿದ್ದಾರೆ. ರಾಹುಲ್ ಗಾಂಧಿ ಜೊತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಾಥ್ ನೀಡಿದ್ದಾರೆ. ಮಂಡ್ಯಕ್ಕೆ ಆಗಮಿಸಿದ ರಾಹುಲ್ ಗಾಂಧಿಯವರನ್ನು ಕಾಂಗ್ರೆಸ್ ನಾಯಕರು ಸ್ವಾಗತಿಸಿದರು.

ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತಪ್ರಚಾರ ನದೆಸಲಿದ್ದಾರೆ. ಬಳಿಕ ಕೋಲಾರಕ್ಕೆ ತೆರಳಿರುವ ರಾಹುಲ್ ಗಾಂಧಿ, ಅಲ್ಲಿ ಕೈ ಅಭ್ಯರ್ಥಿ ಪರ ಮತಯಾಚಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular