HomeKarnatakaರಾಜ್ಯಕ್ಕೆ ಇಂದು ರಾಹುಲ್ ಗಾಂಧಿ: ಶಿವಮೊಗ್ಗ, ರಾಯಚೂರಿನಲ್ಲಿ ಭರ್ಜರಿ ಪ್ರಚಾರ

ರಾಜ್ಯಕ್ಕೆ ಇಂದು ರಾಹುಲ್ ಗಾಂಧಿ: ಶಿವಮೊಗ್ಗ, ರಾಯಚೂರಿನಲ್ಲಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ.

ಗುರುವಾರ ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಚುನಾವಣೆ ಪ್ರಚಾರ ನಡೆಸಲಿದ್ದಾರೆ.

ಮಧ್ಯಾಹ್ನ 2:30ಕ್ಕೆ ರಾಯಚೂರಿಗೆ ತೆರಳಲಿದ್ದು ಬಹಿರಂಗ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿ ಅವರೊಂದಿಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮೊದಲಾದವರು ಭಾಗವಹಿಸಲಿದ್ದಾರೆ. ಮೇ 7ರಂದು ಈ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular