HomeKarnatakaಮತಗಳ್ಳತನದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹೇಳಿದ್ದು ನಿಜವಾಗಿದೆ: ಈಗ ಚುನಾವಣಾ ಆಯುಕ್ತರ ಮಧ್ಯೆ...

ಮತಗಳ್ಳತನದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹೇಳಿದ್ದು ನಿಜವಾಗಿದೆ: ಈಗ ಚುನಾವಣಾ ಆಯುಕ್ತರ ಮಧ್ಯೆ ತೇಪೆ ಹಚ್ಚಿ ಕೂರಿಸಿದ್ದಾರೆ: ಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು: ಮತಗಳ್ಳತನ ವಿಚಾರವಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದ ಅಂಶಗಳು ನಿಜವಾಗಿವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಹೈಕಮಾಂಡ್ ನಾಯಕರು ಮತಗಳ್ಳತನ ವಿಚಾರವಾಗಿ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ಕರೆದಿದ್ದು, ಈ ವಿಚಾರವಾಗಿ ಚರ್ಚೆ ಮಾಡಲು ಖರ್ಗೆ ಸಾಹೇಬರ ಮನೆಗೆ ಭೇಟಿ ನೀಡಿದ್ದೇನೆ. ಆಯೋಗದಲ್ಲಿನ ಅಪಸ್ವರ ಹಾಗೂ ಅಕ್ರಮಗಳು ಬೆಳಕಿಗೆ ಬಂದಿವೆ. ಈ ವಿಚಾರವಾಗಿ ದೇಶವೇ ಜಾಗೃತಗೊಂಡಿದ್ದು, ಪಕ್ಷದ ಮುಂದಿನ ಹೋರಾಟದ ರೂಪುರೇಷೆ ಕುರಿತು ಚರ್ಚೆ ಮಾಡಿದ್ದೇವೆ. ಕಾರ್ಯಕಾರಿ ಸಮಿತಿ ಸಭೆ ಬಳಿಕ ಎಲ್ಲಾ ವಿರೋಧ ಪಕ್ಷಗಳ ಸಭೆ ಕರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಚುನಾವಣಾ ಸೋಲಿನ ಹತಾಶೆಯಿಂದ ಕಾಂಗ್ರೆಸ್ ಹೋರಾಟ ಮಾಡುತ್ತಿದೆ ಎಂಬ ಬಿಜೆಪಿಯ ಟೀಕೆ ಬಗ್ಗೆ ನಾವು ಹೇಳಿದ್ದನ್ನೇ ಚುನಾವಣಾ ಆಯೋಗದವರು ಹೇಳಿದ್ದಾರಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಹುಮತದ ತೀರ್ಮಾನ ಆಗಬೇಕು. ಆದರೆ ಮೂವರಲ್ಲಿ ಇಬ್ಬರು ಆಯುಕ್ತರ ಭಿನ್ನಮತ ನಡುವೆ ತೀರ್ಮಾನ ಮಾಡಲಾಗಿದೆ. ಈಗ ಅವರ ಮಧ್ಯೆ ತೇಪೆ ಹಚ್ಚಿ ಕೂರಿಸಿದ್ದಾರೆ ಎಂದು ತಿರುಗೇಟು ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕದ ವಿಚಾಅರವಾಗಿ ದೆಹಲಿಯಲ್ಲಿ ಈ ಬಗ್ಗೆ ತೀರ್ಮಾನವಾಗಿದೆ. ಹಿರಿಯ ಶಾಸಕರಿಗೆ ನಿಗಮ-ಮಂಡಳಿಗಳಲ್ಲಿ ಅವಕಾಶ ಕಲ್ಪಿಸುವುದು. ನಂತರ ಪಕ್ಷದ ಕಾರ್ಯಕರ್ತರಿಗೂ ಅವಕಾಶ ನೀಡಬೇಕು ಎಂಬ ತೀರ್ಮಾನವಾಗಿದೆ. ಉಳಿದ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದರು.

ಸಂಪುಟದಲ್ಲಿ ಮಹಿಳೆಯರಿಗೆ ಸಚಿವ ಸ್ಥಾನ ನೀಡುವ ವಿಚಾರವಾಗಿ ‘ದೆಹಲಿಗೆ ಹೋದಾಗ ಈ ಬಗ್ಗೆ ಚರ್ಚೆ ಮಾಡಲಾಗುವುದು’ ಎಂದು ಹೇಳಿದರು.

ಇನ್ನು ಗದಗದ ಎಇಇ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಬಗ್ಗೆ ಆ ಅಧಿಕಾರಿ ವಿರುದ್ಧ ಈಗಾಗಲೇ ಹಲವು ದೂರುಗಳು ಬಂದಿದ್ದು, ತನಿಖೆ ನಡೆಯುತ್ತಿದೆ. ಕಾನೂನು ಪ್ರಕಾರ ಕೆಲಸ ಮಾಡುತ್ತಿರಲಿಲ್ಲ ಎಂಬ ದೂರು ಇದೆ. ನಾವು ಯಾವುದೇ ಕಾಮಗಾರಿ ನಡೆದರೂ ಕಾಮಗಾರಿಗೂ ಮುನ್ನ ಹಾಗೂ ನಂತರ ಆ ಸ್ಥಳ ಹೇಗಿದೆ ಎಂದು ವಿಡಿಯೋ ದಾಖಲೆ ಹೊಂದಿರಬೇಕು. ಆಮೂಲಕ ನಕಲಿ ಬಿಲ್ ವಂಚನೆ ತಡೆಯಬೇಕು ಎಂದು ಸೂಚಿಸಿದ್ದೇವೆ. ಆದರೆ ಈತ ಸ್ಥಳಗಳಿಗೆ ಭೇಟಿ ನೀಡುತ್ತಿರಲಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಈ ಹಿಂದೆ ನಾಪತ್ತೆ ಆದ ಪ್ರಕರಣ ನಡೆದಿದ್ದವು. ಅಜ್ಮೀರ್, ಹೈದರಾಬಾದ್ಗೆ ಹೋಗಿರುವ ಬಗ್ಗೆಯೂ ಮಾಹಿತಿ ಇದೆ. ಎಲ್ಲವನ್ನೂ ಪರಿಶೀಲಿಸಲಾಗುತ್ತಿದೆ ಎಂದರು.

ಬೈರಮಂಗಲದಲ್ಲಿ ರೈತರು ರಸ್ತೆ ತಡೆ ನಡೆಸಿದ ಪ್ರಕರಣದ ಕುರಿತು, ರಸ್ತೆ ತಡೆ ಯಾಕೆ ಮಾಡಬೇಕು? ರಸ್ತೆ ತಡೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಜಮೀನು ನೀಡುವಂತೆ ಯಾರ ಮೇಲೂ ಒತ್ತಡ ಹಾಕುತ್ತಿಲ್ಲ. ಜಮೀನು ಕೊಡಬೇಡಿ ಎಂದೇ ಹೇಳುತ್ತಿದ್ದೇನೆ. ತಮ್ಮ ಬದುಕು ಕಟ್ಟಿಕೊಳ್ಳಲು ಹಣದ ಅಗತ್ಯವಿರುವವರು ಭೂಮಿ ನೀಡುತ್ತಾರೆ, ಬೇಡ ಎನ್ನುವವರು ಕೊಡುವುದಿಲ್ಲ. ಈ ವಿಚಾರದಲ್ಲಿ ನನಗೆ ಆತುರ, ಪ್ರತಿಷ್ಠೆ ಇಲ್ಲ. ಕುಮಾರಸ್ವಾಮಿ ಅವರು ಆರಂಭಿಸಿರುವುದನ್ನು ನಾನು ಮುಂದುವರಿಸುತ್ತಿರುವೆ ಎಂದು ಸ್ಪಷ್ಟಪಡಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular