HomeKarnatakaರಾಹುಲ್ ಗಾಂಧಿ ವಿಪಕ್ಷ ನಾಯಕರಾಗಬೇಕು; ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯ

ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಬೇಕು; ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಬೇಕು ಎಂಬುದು ನಮ್ಮೆಲ್ಲರ ಆಶಯ. ವಿಪಕ್ಷ ನಾಯಕನ ಆಯ್ಕೆ ನಿಟ್ಟಿನಲ್ಲಿ ಇಂದು ದೆಹಲಿಯಲ್ಲಿ ಇಂಡಿಯಾ ಮೈತ್ರಿ ನಾಯಕರ ಸಭೆ ನಡೆಯಲಿದೆ. ಸಭೆಯಲ್ಲಿಯೂ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಹುಲ್ ಗಾಂಧಿಗೆ ವಿಪಕ್ಷ ನಾಯಕನ ಸ್ಥಾನ ನೀಡಬೇಕು. ದೇಶಾದ್ಯಂತ ಪಾದಯಾತ್ರೆಯನ್ನು ಮಾಡಿ ಪಕ್ಷ ಸಂಘಟನೆ ಹಾಗೂ ಜನರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ದೇಶದ ಜ್ವಲಂತ ಸಮಸ್ಯೆಗಳ ಬಗ್ಗೆ ಸಂಸತ್ ನಲ್ಲಿ ಚರ್ಚಿಸಲು ಗಟ್ಟಿ ಧ್ವನಿಯಾಗಿ ರಾಹುಲ್ ಗಾಂಧಿ ನಿಲ್ಲಬೇಕು ಹಾಗಾಗಿ ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಬೇಕು ಎಂಬುದು ನಮ್ಮ ಅಭಿಪ್ರಾಯ ಎಂದರು.

 

For Latest News Updates, Join Our Whatsapp Community🚩
RELATED ARTICLES

Most Popular