HomeIndiaಪ್ರತಿಭಟನೆ ವೇಳೆ ಗರ್ಭಿಣಿ ಪತ್ರಕರ್ತೆಯನ್ನು ತಳ್ಳಿದ್ರಾ ರಾಹುಲ್ ಗಾಂಧಿ? ಗಾಯಾಳು ಜರ್ನಲಿಸ್ಟ್ ಆಸ್ಪತ್ರೆಗೆ ದಾಖಲು

ಪ್ರತಿಭಟನೆ ವೇಳೆ ಗರ್ಭಿಣಿ ಪತ್ರಕರ್ತೆಯನ್ನು ತಳ್ಳಿದ್ರಾ ರಾಹುಲ್ ಗಾಂಧಿ? ಗಾಯಾಳು ಜರ್ನಲಿಸ್ಟ್ ಆಸ್ಪತ್ರೆಗೆ ದಾಖಲು

ನವದೆಹಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಅಕ್ರಮ ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ದೆಹಲಿಯಲ್ಲಿ ನಡೆಸಿದ ಸುಪ್ರೀಂ ಕೋರ್ಟ್ ಮೆರವಣಿಗೆಯ ವೇಳೆ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದ ಮೂರು ತಿಂಗಳ ಗರ್ಭಿಣಿ ಪತ್ರಕರ್ತೆಯನ್ನು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿ. ಪತ್ರಕರ್ತೆ ಬಿದ್ದು ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಗಾಯಾಳು ಪತ್ರಕರ್ತೆ ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪತ್ರಕರ್ತೆಯನ್ನು ರಿಚಾ ಪರಾಶರ್ ಎಂದು ಗುರುತಿಸಲಾಗಿದೆ. ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಗರ್ಭಿಣಿ ಪತ್ರಕರ್ತೆಯನ್ನು ತಳ್ಳಿ ಕೆಡವಿದ ಗಂಭೀರ ಆರೋಪ ಮಾಡಿದ್ದಾರೆ. ಈ ಆರೋಪಗಳ ಕುರಿತು ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್ ಪಕ್ಷದಿಂದ ತಕ್ಷಣದ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ನಾಯಕ ರಾಜೇಶ್ ಭಾಟಿಯಾ ಮಾತನಾಡಿ, ರಾತ್ರಿ 8.30ರ ಸುಮಾರಿಗೆ ಪತ್ರಕರ್ತೆಯ ಸಹೋದರಿ ರಾಜಿಂದರ್ ನಗರದಲ್ಲಿರುವ ನನ್ನ ಕಚೇರಿಗೆ ಬಂದು ನೆರವು ಕೋರಿದರು. ತಮ್ಮ ಸಹೋದರಿ ಗರ್ಭಿಣಿಯಾಗಿದ್ದು, ಕರ್ತವ್ಯದ ವೇಳೆ ರಾಹುಲ್ ಗಾಂಧಿ ಅವರನ್ನು ತಳ್ಳಿದ್ದರಿಂದ ಗಾಯಗೊಂಡಿದ್ದು ಚಿಕಿತ್ಸೆಯ ಅಗತ್ಯವಿದೆ ಎಂದು ತಿಳಿಸಿದರು ಎಂದಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಬಿಜೆಪಿ ಶಾಸಕ ಉಮಾಂಗ್ ಬಜಾಜ್, ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಮತ್ತು ರಾಜೇಶ್ ಭಾಟಿಯಾ ಆಸ್ಪತ್ರೆಗೆ ಧಾವಿಸಿ ಪತ್ರಕರ್ತೆಯ ಆರೋಗ್ಯ ವಿಚಾರಿಸಿದರು.

ಪತ್ರಕರ್ತೆ ರಿಚಾ ಪರಾಶರ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ವೀಡಿಯೊವನ್ನು ಪ್ರದೀಪ್ ಭಂಡಾರಿ ತಮ್ಮ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದ್ದು, ಮೂರು ತಿಂಗಳ ಗರ್ಭಿಣಿಯೊಬ್ಬರು ತನ್ನ ವೃತ್ತಿಪರ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅವರ ಮೇಲೆ ಹಲ್ಲೆ ನಡೆಸಿ ಕೆಳಕ್ಕೆ ಕೆಡವಲಾಗಿದೆ. ಮಹಿಳಾ ಸುರಕ್ಷತೆ ಬಗ್ಗೆ ಭಾಷಣ ಬಿಗಿಯುವ ನಾಯಕರ ಅಸಲಿ ಮುಖವಾಡ ಕಳಚಿಬಿದ್ದಿದೆ ಎಂದು ಕಿಡಿಕಾರಿದ್ದಾರೆ.

ಕೇವಲ ತನ್ನ ವೃತ್ತಿ ಕೆಲಸ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯ ಮೇಲೆ ಈ ರೀತಿ ಅಸಭ್ಯವಾಗಿ ವರ್ತಿಸುವುದು ಅತ್ಯಂತ ಖಂಡನೀಯ ಎಂದು ಉಮಾಂಗ್ ಬಜಾಜ್ ಆಕ್ರೋಶ ಹೊರಹಾಕಿದ್ದಾರೆ.

ಬಿಜೆಪಿ ಮುಖಂಡರು ಈ ಘಟನೆಯನ್ನು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (NCW) ಕೊಂಡೊಯ್ಯಲು ಮತ್ತು ದೆಹಲಿ ಪೊಲೀಸರಿಗೆ ದೂರು ನೀಡಿ ಎಫ್‌ಐಆರ್ ದಾಖಲಿಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular