‘ವ್ಯವಸ್ಥೆಯ ವೈಫಲ್ಯ, ಜನ ಬೆಲೆ ತೆರುತ್ತಿದ್ದಾರೆ…’: UPSC ಆಕಾಂಕ್ಷಿಗಳ ಸಾವಿನ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ನವದೆಹಲಿ: ರಾಷ್ಟ್ರ ರಾಜಧಾನಿಯ ಕೋಚಿಂಗ್ ಸೆಂಟರ್‌ ನೆಲಮಾಳಿಗೆ ಜಲಾವೃತಗೊಂಡು ಮೂವರು ನಾಗರಿಕ ಸೇವಾ ಆಕಾಂಕ್ಷಿಗಳ ಸಾವನ್ನಪ್ಪಿದ್ದಕ್ಕೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದು, ಪ್ರತಿ ಹಂತದಲ್ಲೂ ಸಂಸ್ಥೆಗಳ ಬೇಜವಾಬ್ದಾರಿ, ಅಸುರಕ್ಷಿತ ನಿರ್ಮಾಣಕ್ಕೆ ಸಾಮಾನ್ಯ ಜನರು ಬೆಲೆ ತೆರುತ್ತಿದ್ದಾರೆ ಎಂದು ದೂರಿದ್ದಾರೆ.

ಶನಿವಾರ ಭಾರೀ ಮಳೆಯಿಂದಾಗಿ ಮಧ್ಯ ದೆಹಲಿಯ ಓಲ್ಡ್ ರಾಜಿಂದರ್ ನಗರ ಪ್ರದೇಶದಲ್ಲಿ ಕೋಚಿಂಗ್ ಸೆಂಟರ್ ಇರುವ ಕಟ್ಟಡದ ನೆಲಮಾಳಿಗೆಯು ಜಲಾವೃತಗೊಂಡ ನಂತರ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಹುಲ್ ಗಾಂಧಿ ಪ್ರತಿಕ್ರಿಯೆ

ದೆಹಲಿಯ ಕಟ್ಟಡದ ನೆಲಮಾಳಿಗೆಯಲ್ಲಿ ನೀರು ನಿಂತಿದ್ದರಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಗಳು ಸಾವನ್ನಪ್ಪಿರುವುದು ಅತ್ಯಂತ ದುರದೃಷ್ಟಕರ. ಕೆಲ ದಿನಗಳ ಹಿಂದೆ ಮಳೆಗಾಲದಲ್ಲಿ ವಿದ್ಯುತ್ ಸ್ಪರ್ಶವಾಗಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮೂಲಸೌಕರ್ಯಗಳ ಕೊರತೆ, ಕುಸಿತ ವ್ಯವಸ್ಥೆಯ ಸಂಯೋಜಿತ ವೈಫಲ್ಯವಾಗಿದೆ. ಸಾಮಾನ್ಯ ನಾಗರಿಕನು ತನ್ನ ಜೀವನವನ್ನು ಕಳೆದುಕೊಳ್ಳುವ ಮೂಲಕ ಪ್ರತಿ ಹಂತದಲ್ಲೂ ಅಸುರಕ್ಷಿತ ನಿರ್ಮಾಣ, ಕಳಪೆ ನಗರ ಯೋಜನೆ ಮತ್ತು ಸಂಸ್ಥೆಗಳ ಬೇಜವಾಬ್ದಾರಿಯ ಬೆಲೆಯನ್ನು ಪಾವತಿಸುತ್ತಿದ್ದಾನೆ. ಸುರಕ್ಷಿತ ಮತ್ತು ನೆಮ್ಮದಿಯ ಜೀವನ ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ಸರ್ಕಾರಗಳ ಜವಾಬ್ದಾರಿಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

https://twitter.com/RahulGandhi/status/1817443361311055980

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read