HomeIndiaBREAKING: ನಾಳೆ ಸಂಸದ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ

BREAKING: ನಾಳೆ ಸಂಸದ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ರಾಹುಲ್ ಗಾಂಧಿ ರಾಯಬರೇಲಿ ಲೋಕಸಭಾ ಕ್ಷೇತ್ರದಿಂದಲೂ ಚುನಾಯಿತರಾಗಿದ್ದಾರೆ.

ರಾಯಬರೇಲಿ, ವಯನಾಡು ಎರಡೂ ಕ್ಷೇತ್ರಗಳಲ್ಲಿ ಜಯಗಳಿಸಿದ ರಾಹುಲ್ ಗಾಂಧಿ ರಾಯಬರೇಲಿ ಕ್ಷೇತ್ರವನ್ನು ಉಳಿಸಿಕೊಂಡು ವಯನಾಡು ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ. ನಾಳೆ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ.

ಕಳೆದ ಬಾರಿ ಮತ್ತು ಈ ಬಾರಿ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ವಯನಾಡು ಕ್ಷೇತ್ರದಿಂದ ರಾಹುಲ್ ಗಾಂಧಿ ಚುನಾಯಿತರಾಗಿದ್ದರು. ಇತ್ತೀಚೆಗಷ್ಟೇ ಪ್ರಿಯಾಂಕಾ ಅವರೊಂದಿಗೆ ವಯನಾಡು ಕ್ಷೇತ್ರಕ್ಕೆ ಭೇಟಿ ನೀಡಿ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular