HomeKarnatakaಬಿಡುವಿಲ್ಲದ ಕಾರ್ಯಕ್ರಮಗಳ ನಡುವೆಯೂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ

ಬಿಡುವಿಲ್ಲದ ಕಾರ್ಯಕ್ರಮಗಳ ನಡುವೆಯೂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ

ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ತೆರಳುವ ಮೊದಲು ಮೈಸೂರು ವಿಮಾನ ನಿಲ್ದಾಣದಲ್ಲಿ ಕೆಲಕಾಲ ತಂಗಿದ್ದಾರೆ. ಈ ಸಂದರ್ಭದಲ್ಲಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ್ದು, ವಿಶ್ರಾಂತಿಗೆ ಸಲಹೆ ನೀಡಿದ್ದಾರೆ.

ರಾಹುಲ್ ಗಾಂಧಿ ಮೈಸೂರು ಮಾರ್ಗವಾಗಿ ಕೇರಳದ ವಯನಾಡಿಗೆ ಪ್ರಯಾಣ ಬೆಳೆಸಿದ್ದಾರೆ. ಅವರನ್ನು ಕಾಂಗ್ರೆಸ್ ಮುಖಂಡರು ಸ್ವಾಗತಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ದೋಸೆ ಸೇವಿಸಿದ ರಾಹುಲ್ ಗಾಂಧಿ ಮುಖಂಡರಿಂದ ಸಿದ್ದರಾಮಯ್ಯ ಬಿಡುವಿಲ್ಲದ ಪ್ರಚಾರದಿಂದ ಬಳಲಿದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಕೂಡಲೇ ಅವರಿಗೆ ಕರೆ ಮಾಡಿ ಚುನಾವಣೆಗಿಂತ ನಿಮ್ಮ ಆರೋಗ್ಯ ಮುಖ್ಯ. ವಿಶ್ರಾಂತಿ ಪಡೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇರಳದ ವಯನಾಡಿಗೆ ತೆರಳುವ ಮೊದಲು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ವಿಶ್ರಾಂತಿ ಪಡೆದು ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular