HomeIndiaರಾಹುಲ್ ಗಾಂಧಿ ಸರ್ಕಾರಿ ಬಂಗಲೆಯಿಂದ ವಸ್ತುಗಳ ಸ್ಥಳಾಂತರ: ಸೋನಿಯಾ ನಿವಾಸಕ್ಕೆ ಶಿಫ್ಟ್

ರಾಹುಲ್ ಗಾಂಧಿ ಸರ್ಕಾರಿ ಬಂಗಲೆಯಿಂದ ವಸ್ತುಗಳ ಸ್ಥಳಾಂತರ: ಸೋನಿಯಾ ನಿವಾಸಕ್ಕೆ ಶಿಫ್ಟ್

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ತಮ್ಮ 12 ತುಘಲಕ್ ಲೇನ್ ಬಂಗಲೆಯನ್ನು ಖಾಲಿ ಮಾಡುವ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ. ಟ್ರಕ್‌ ಗಳಲ್ಲಿ ಅವರ ಮನೆಯ ವಸ್ತುಗಳನ್ನು ಅವರ ತಾಯಿ ಸೋನಿಯಾ ಗಾಂಧಿಯವರ 10 ಜನಪಥ್ ನಿವಾಸಕ್ಕೆ ಕೊಂಡೊಯ್ಯಲಾಗಿದೆ.

ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದ ಆದೇಶದ ಮೇರೆಗೆ ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ಏಪ್ರಿಲ್ 22 ರೊಳಗೆ ರಾಹುಲ್ ಗಾಂಧಿ ಬಂಗಲೆಯನ್ನು ಖಾಲಿ ಮಾಡುವಂತೆ ನೋಟಿಸ್ ಕಳುಹಿಸಿದ ನಂತರ ಬಂಗಲೆಯನ್ನು ಖಾಲಿ ಮಾಡುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾನನಷ್ಟ ಮೊಕದ್ದಮೆಯಲ್ಲಿನ ಶಿಕ್ಷೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿರುವ ಮಧ್ಯಂತರ ಅರ್ಜಿಯ ಕುರಿತು ಏಪ್ರಿಲ್ 20 ರಂದು ಆದೇಶವನ್ನು ಪ್ರಕಟಿಸಲು ಸೂರತ್ ಸೆಷನ್ಸ್ ಕೋರ್ಟ್ ನಿರ್ಧರಿಸಿದ ಒಂದು ದಿನದ ನಂತರ ಬಂಗಲೆಯನ್ನು ಖಾಲಿ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಮೇಲ್ಮನವಿ ಸಲ್ಲಿಸಿದ್ದ ಕಾಂಗ್ರೆಸ್ ನಾಯಕನಿಗೆ ನ್ಯಾಯಾಲಯ ಏಪ್ರಿಲ್ 3 ರಂದು ಜಾಮೀನು ನೀಡಿತ್ತು. ರಾಹುಲ್ ಗಾಂಧಿ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಶಾಶ್ವತವಾಗಿ ಸ್ಥಳಾಂತರಗೊಳ್ಳುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಅವರ ಕಚೇರಿಯು ಮತ್ತೊಂದು ಮನೆಗಾಗಿ ಹುಡುಕಾಟ ನಡೆಸುತ್ತಿದೆ. Z + ಭದ್ರತೆ ಇರುವುದರಿಂದ ಭದ್ರತಾ ಸಂಸ್ಥೆಗಳಿಂದ ಗ್ರೀನ್ ಸಿಗ್ನಲ್ ಪಡೆದ ನಂತರ ಅಂತಿಮಗೊಳಿಸಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular