ನವದೆಹಲಿ: ದೇಶದ ಗಮನ ಸೆಳೆದಿರುವ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಎಐಸಿಸಿ ವತಿಯಿಂದ ಅಧಿಕೃತವಾಗಿ ರಾಹುಲ್ ಗಾಂಧಿ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.
ಈ ಲೋಕಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ರಾಯ್ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅಂತಿಮವಾಗಿ ಪ್ರಿಯಾಂಕಾ ಗಾಂಧಿ ಚುನಾವಣಾ ಕಣದಿಂದ ದೂರ ಉಳಿದಿದ್ದಾರೆ.
ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದ ಈ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತು. ಅವರು ಸ್ಪರ್ಧೆಯಿಂದ ದೂರ ಉಳಿದಿದ್ದು, ರಾಹುಲ್ ಗಾಂಧಿ ರಾಯ್ ಬರೇಲಿಯಿಂದ ಸ್ಪರ್ಧಿಸಲಿದ್ದಾರೆ. ವಯನಾಡು ಜೊತೆಗೆ ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧಿಸಲಿದ್ದಾರೆ.
ಎಐಸಿಸಿಯಿಂದ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ. ಅಮೇಥಿ ಕ್ಷೇತ್ರದಿಂದ ಕೆಎಲ್ ಶರ್ಮಾ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
Congress releases another list of candidates for the upcoming #LokSabhaElections2024
Rahul Gandhi to contest from Raebareli and Kishori Lal Sharma from Amethi. pic.twitter.com/2w4QQcn9ok
— ANI (@ANI) May 3, 2024