Loka Sabha Election : ವಯನಾಡು ಲೋಕಸಭಾ ಕ್ಷೇತ್ರದಿಂದ ಇಂದು ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ

ವಯನಾಡ್: ವಯನಾಡ್ ಜಿಲ್ಲೆಯ ಕಲ್ಪೆಟ್ಟಾದಲ್ಲಿ ರೋಡ್ ಶೋ ನಡೆಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ವಯನಾಡ್ ಸಂಸದೀಯ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ.

ಸಿಪಿಐ ರಾಷ್ಟ್ರೀಯ ನಾಯಕಿ ಮತ್ತು ಎಡ ಪ್ರಜಾಸತ್ತಾತ್ಮಕ ರಂಗ (ಎಲ್ಡಿಎಫ್) ಅಭ್ಯರ್ಥಿ ಅನ್ನಿ ರಾಜ್ ಕೂಡ ಇದೇ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.ಕೇಂದ್ರ ಗೃಹ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಅಮಿತ್ ಶಾ ಅವರು ಉತ್ತರ ಪ್ರದೇಶದ ಮುಜಾಫರ್ ನಗರದ ಶಹಪುರ್ ಪಟ್ಟಣದಲ್ಲಿ ರ್ಯಾಲಿಯೊಂದಿಗೆ ತಮ್ಮ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.

ಹಾಗೆಯೇ ಅಸ್ಸಾಂ, ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಆಂಧ್ರಪ್ರದೇಶದ ಉನ್ನತ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಚುನಾವಣಾ ಆಯೋಗ ಏಪ್ರಿಲ್ 2 ರಂದು ಆದೇಶ ಹೊರಡಿಸಿದೆ. ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಬಿಹಾರ ರಾಜ್ಯಗಳಲ್ಲಿ ವಿಶೇಷ ವೀಕ್ಷಕರನ್ನು ಚುನಾವಣಾ ಆಯೋಗ ನೇಮಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read