ರಾಹುಲ್ ಗಾಂಧಿ ಬಗ್ಗೆ ಕೀಳು ಪದ ಬಳಸಿ ಅವಹೇಳನ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಕೀಳು ಪದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪದಡಿ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರು ನೀಡಿದ ದೂರು ಆಧರಿಸಿ ಬುಧವಾರ ರಾತ್ರಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ರಾಹುಲ್ ಗಾಂಧಿ ಅವರ ಹುಟ್ಟಿನ ಬಗ್ಗೆ ಯತ್ನಾಳ್ ಕೀಳು ಪದ ಬಳಸಿ ಮಾತನಾಡಿದ್ದಾರೆ. ಧರ್ಮಗಳ ಹೆಸರು ಪ್ರಸ್ತಾಪಿಸಿ ಅವಹೇಳನ ಮಾಡಿದ್ದಾರೆ. ಅವರ ಹೇಳಿಕೆ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಕೋಮು ಗಲಭೆ ಸೃಷ್ಟಿಸುವಂತಹ ಹೇಳಿಕೆಯನ್ನು ಯತ್ನಾಳ್ ನೀಡಿದ್ದಾರೆ ಎಂದು ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯತ್ನಾಳ್ ಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read