ನವದೆಹಲಿ: ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮೇಲಿನ ಚರ್ಚೆ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪ ಮಾಡಿರುವ ಕಾಂಗ್ರೆಸ್ ಸಂಸದ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ವಜಾಗೊಳಿಸುವಂತೆ ಬಿಜೆಪಿ ನಿರ್ಣಯ ಮಂಡಿಸಲಿದೆ.
ಬಿಜೆಪಿ ಸಂಸದ ನಿಶಿಕಾಂತ್ ದುಬೆ, ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ವಜಾಗೊಳಿಸುವಂತೆ ನಿರ್ಣಯ ಮಂಡಿಸುವುದಾಗಿ ತಿಳಿಸಿದ್ದಾರೆ. ರಾಹುಲ್ ಗಾಂಧಿ ಭಾರತ-ಅಮೆರಿಕ ವ್ಯಾಪಾರ ಒಪ್ಪಂದ, ಕೇಂದ್ರ ಬಜೆಟ್ ನ್ನು ಕಟುವಾಗಿ ಟೀಕಿಸಿದ ಒಂದು ದಿನದ ಬಳಿಕ ಬಿಜೆಪಿ ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನಿರ್ಣಯಕ್ಕೆ ಸಿದ್ಧತೆ ನಡೆಸಿದೆ.
ರಾಹುಲ್ ಗಾಂಧಿಯವರು ಸರ್ಕಾರದ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ನಿರ್ಣಯ ಮಂಡಿಸಲು ಸಿದ್ಧತೆ ನಡೆಸಲಾಗಿದೆ ಎಂದು ಸಂಸದ ದುಬೆ ತಿಳಿಸಿದ್ದಾರೆ.

