BREAKING : ಡಿಸೆಂಬರ್ ನಿಂದ ರಾಹುಲ್ ಗಾಂಧಿ ಸಾರಥ್ಯದ ‘ಭಾರತ್ ಜೋಡೋ ಯಾತ್ರೆ’ ಆರಂಭ | Bharath Jodo Yatra 2.O

ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಯಾತ್ರೆಯ ಎರಡನೇ ಹಂತಕ್ಕೆ ತಯಾರಿ ನಡೆಸುತ್ತಿದೆ. ಈ ಬಾರಿ ಯಾತ್ರೆ ಮೊದಲಿನಂತೆಯೇ ಇರಲಿದ್ದು, ಭಾರತ್ ಜೋಡೋ ಯಾತ್ರೆಯ ಎರಡನೇ ಹಂತವನ್ನು ಡಿಸೆಂಬರ್ ನಿಂದ ಆರಂಭಿಸಲು ಕಾಂಗ್ರೆಸ್ ಸಿದ್ದತೆ ನಡೆಸಿದೆ.

ಡಿಸೆಂಬರ್ 2023 ಮತ್ತು ಫೆಬ್ರವರಿ 2024 ರ ನಡುವೆ ಯಾವುದೇ ಸಮಯದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರಾ 2.0 ಹೈಬ್ರಿಡ್ ಮೋಡ್ ನಲ್ಲಿರಲಿದ್ದು, ಕಾಲ್ನಡಿಗೆಯಲ್ಲಿ ಮತ್ತು ವಾಹನಗಳನ್ನು ಬಳಸಿ ಮೆರವಣಿಗೆ ನಡೆಸಲಿದ್ದಾರೆ.ಭಾರತ್ ಜೋಡೋ ಯಾತ್ರೆಯ ಮೊದಲ ಹಂತವು ಸೆಪ್ಟೆಂಬರ್ 7, 2022 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಗಿತ್ತು. ಸುಮಾರು 4,080 ಕಿ.ಮೀ ದೂರವನ್ನು ಕ್ರಮಿಸಿದ ಯಾತ್ರೆ 2023 ರ ಜನವರಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ

ಕೊನೆಗೊಂಡಿತು.ಈ ಯಾತ್ರೆಯು 126 ದಿನಗಳಲ್ಲಿ 12 ರಾಜ್ಯಗಳ 75 ಜಿಲ್ಲೆಗಳ ಮೂಲಕ ಹಾದುಹೋಗಿತ್ತು. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು ಈ ಬಾರಿ ಪೂರ್ವದಿಂದ ಪಶ್ಚಿಮಕ್ಕೆ ಮತ್ತೊಂದು ಭಾರತ್ ಜೋಡೋ ಯಾತ್ರೆಯನ್ನು ಕೈಗೊಳ್ಳುವಂತೆ ರಾಹುಲ್ ಗಾಂಧಿ ಅವರನ್ನು ಒತ್ತಾಯಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read