ರಾಹುಲ್ ಗಾಂಧಿ ಭಾಷಣಕ್ಕೆ ಹಿಂದೂಪರ ಸಂಘಟನೆಗಳ ಕಿಡಿ ; ಕಾಂಗ್ರೆಸ್ ಕಚೇರಿಗೆ ಕಲ್ಲು ತೂರಾಟ

ರಾಹುಲ್ ಗಾಂಧಿ ಭಾಷಣಕ್ಕೆ ಹಿಂದೂಪರ ಸಂಘಟನೆಗಳು ಕಿಡಿಕಾರಿದ್ದು, ಕಾಂಗ್ರೆಸ್ ಕಚೇರಿಗೆ ಕಲ್ಲು ತೂರಾಟ ನಡೆಸಿದೆ.

ಹಿಂದೂಪರ ಸಂಘಟನೆಗಳು ಗುಜರಾತ್ ರಾಜಧಾನಿ ಅಹಮದಾಬಾದ್ ನ ಕಾಂಗ್ರೆಸ್ ಕಚೇರಿಯ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಅಹಮದಾಬಾದ್ ಪೊಲೀಸರು ಕಲ್ಲು ತೂರಾಟ ಪ್ರಕರಣ ದಾಖಲಿಸಿಕೊಂಡಿದ್ದು, ಇದುವರೆಗೆ ಯಾರನ್ನೂ ಕೂಡ ಬಂಧಿಸಲಾಗಿಲ್ಲ ಎಂದು ತಿಳಿದು ಬಂದಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಸದನದಲ್ಲಿ ಮಾತನಾಡುವಾಗ ಬಿಜೆಪಿಯು ಭಾರತದಲ್ಲಿ ಹಿಂಸಾಚಾರ, ದ್ವೇಷ ಮತ್ತು ಭಯವನ್ನು ಹರಡುತ್ತಿದೆ ಎಂದು ಆರೋಪಿಸಿದ್ದಾರೆ. ಹಿಂದೂ ಧರ್ಮ ಅಹಿಂಸೆಯನ್ನು ಪಸರಿಸಿದೆ ತಮ್ಮನ್ನು ಹಿಂದೂಗಳೆಂದು ಹೇಳಿಕೊಳ್ಳುತ್ತಿರುವವರು ಹಿಂಸಾಚಾರಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಭಾಷಣ ಮಾಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read