ನಾಳೆ ಕೂಡಲಸಂಗಮದಲ್ಲಿ ಜರುಗುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿ

ಕರ್ನಾಟಕ ವಿಧಾನಸಭಾ ಚುನಾವಣಾ ಬಿಸಿ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ರಾಜ್ಯ ಪ್ರವಾಸ ಮಾಡಲಿದ್ದಾರೆ. ಈ ಬಾರಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ರಾಹುಲ್ ಗಾಂಧಿ
ಏಪ್ರಿಲ್ 23 ರಂದು ಬೆಳಗ್ಗೆ 11 ಗಂಟೆಗೆ ಕೂಡಲಸಂಗಮದಲ್ಲಿ ಜರುಗುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಭಾಲ್ಕಿಯ ಬಸವಲಿಂಗ ಪಟ್ಟದ್ದೇವರು, ಗದಗ ತೋಂಟದಾರ್ಯ ಮಠದ ಸಿದ್ದರಾಮ ಸ್ವಾಮಿ, ಇಳಕಲ್‌ನ ಗುರುಮಹಾಂತ ಸ್ವಾಮಿ, ಬಸವದಳ ಪೀಠದ ಮಹದೇಶ್ವರ ಸ್ವಾಮಿ ಸೇರಿದಂತೆ ಹಲವು ಲಿಂಗಾಯತ ಶ್ರೀಗಳನ್ನು ಆಹ್ವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗಷ್ಟೇ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಬಿಜೆಪಿಯ ಹಿರಿಯ ಮುಖಂಡರಾದ ಜಗದೀಶ್‌ ಶೆಟ್ಟರ್‌ ಮತ್ತು ಲಕ್ಷ್ಮಣ ಸವದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಶುಕ್ರವಾರ ಕಾಂಗ್ರೆಸ್ ಪ್ರಚಾರ ಸಮಿತಿ ಮುಖಂಡ ಎಂ.ಬಿ.ಪಾಟೀಲ್, ಪಕ್ಷದ ಹುನಗುಂದ ಅಭ್ಯರ್ಥಿ ವಿಜಯಾನಂದ ಕಾಶಪ್ಪನವರ್, ಬಾಗಲಕೋಟ ಡಿಸಿಸಿ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read