Rai Alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ‘ಮಳೆ’ : ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು, ಚಿಕ್ಕಮಗಳೂರು, ಹಾಸನ, ಉಡುಪಿ , ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ನಾಳೆ ಈ ಜಿಲ್ಲೆಗಳ ಜೊತೆ ಶಿವಮೊಗ್ಗ ಜಿಲ್ಲೆಯಲ್ಲೂ ಮಳೆಯಾಗುವ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ನಾಳೆ ಶನಿವಾರದಂದು ಕರಾವಳಿಯ ಹಲವು ಕಡೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿದೆ. ಆದರೆ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

https://twitter.com/KarnatakaSNDMC/status/1727643587553186295

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read