HomeKarnatakaಪೊಲೀಸ್ ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿಗಳು

ಪೊಲೀಸ್ ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿಗಳು

ರಾಯಚೂರು: ಕಾಪರ್ ವೈರ್ ಕದ್ದು ಪರಾರಿಯಾಗುತ್ತಿದ್ದ ಆರೋಪಿಗಳನ್ನು ಬೆನ್ನಟ್ಟಿದ್ದ ಪೊಲೀಸರ ಮೇಲೆ ನಡು ರಸ್ತೆಯಲ್ಲೇ ಮಾರಣಾಂತಿಕ ಹಲ್ಲೆ ನಡೆಸಿ, ಆರೋಪಿಗಳು ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ನಡೆದಿದೆ.

ಗುಡದೂರು ಕಾಲುವೆ ಬಳಿ ಆರೋಪಿಗಳು ಪೊಲೀಸರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಬಳಗಾನೂರ ಠಾಣೆ ಪೇದೆ ಮಂಜುನಾಥ್, ಗೋಪಾಲ್ ಗಂಭೀರವಾಗಿ ಗಯಗೊಂಡು ಸಿಂಧನೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲ್ಲೆಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಬಳಗಾನೂರು ಠಾಣೆಯಲ್ಲಿ 6 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular