ರಾಯಚೂರು: ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಬಾಲಕ ಮೇಲೆ ಬಸ್ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ಬಸ್ ನಿಲ್ದಾಣದಲ್ಲಿ ನಡೆದಿದೆ.
ಸಿದ್ದರಾಮ (12) ಮೃತ ದುರ್ದೈವಿ. ಘಟನೆಯಲ್ಲಿ ಆತನ ಸಹೋದರ ಧನಂಜಯ ಗಂಭೀರವಾಗಿ ಗಾಯಗೊಂಡಿದ್ದಾನೆ. ಲಿಂಗಸಗೂರು ಬಸ್ ನಿಲ್ದಾಣದಲ್ಲಿ ಬಾಲಕರಿಬ್ಬರೂ ಬಸ್ ಗಾಗಿ ಕಾಯುತ್ತಿದ್ದರು. ಈ ವೇಳೆ ಏಕಾಏಕಿ ಬಂದ ಬಸ್ ಬಾಲಕರ ಮೇಲೆ ಹರಿದಿದೆ. ಬಾಲಕ ಸಿದ್ದರಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನೋರ್ವ ಬಾಲಕನ ಕೈ-ಕಾಲುಗಳಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಿಂಗಸಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
