HomeLatest NewsBIG NEWS: ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಬಾಲಕನ ಮೇಲೆ ಹರಿದ ಬಸ್: ಸ್ಥಳದಲ್ಲೇ...

BIG NEWS: ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಬಾಲಕನ ಮೇಲೆ ಹರಿದ ಬಸ್: ಸ್ಥಳದಲ್ಲೇ ದುರ್ಮರಣ

ರಾಯಚೂರು: ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಬಾಲಕ ಮೇಲೆ ಬಸ್ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ಬಸ್ ನಿಲ್ದಾಣದಲ್ಲಿ ನಡೆದಿದೆ.

ಸಿದ್ದರಾಮ (12) ಮೃತ ದುರ್ದೈವಿ. ಘಟನೆಯಲ್ಲಿ ಆತನ ಸಹೋದರ ಧನಂಜಯ ಗಂಭೀರವಾಗಿ ಗಾಯಗೊಂಡಿದ್ದಾನೆ. ಲಿಂಗಸಗೂರು ಬಸ್ ನಿಲ್ದಾಣದಲ್ಲಿ ಬಾಲಕರಿಬ್ಬರೂ ಬಸ್ ಗಾಗಿ ಕಾಯುತ್ತಿದ್ದರು. ಈ ವೇಳೆ ಏಕಾಏಕಿ ಬಂದ ಬಸ್ ಬಾಲಕರ ಮೇಲೆ ಹರಿದಿದೆ. ಬಾಲಕ ಸಿದ್ದರಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನೋರ್ವ ಬಾಲಕನ ಕೈ-ಕಾಲುಗಳಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಿಂಗಸಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular