HomeKarnatakaBREAKING: 1.5 ಕಿ.ಮೀ. ದೂರದಲ್ಲಿ ಪತ್ತೆಯಾಯ್ತು ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬ್ಯಾಂಕ್ ಉದ್ಯೋಗಿ ಮೃತದೇಹ

BREAKING: 1.5 ಕಿ.ಮೀ. ದೂರದಲ್ಲಿ ಪತ್ತೆಯಾಯ್ತು ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬ್ಯಾಂಕ್ ಉದ್ಯೋಗಿ ಮೃತದೇಹ

ರಾಯಚೂರು: ರಾಯಚೂರು ತಾಲೂಕಿನ ಫತ್ತೇಪುರ ಗ್ರಾಮದ ಬಳಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬ್ಯಾಂಕ್ ಸಿಬ್ಬಂದಿಯ ಶವ ಪತ್ತೆಯಾಗಿದೆ.

ಹೆಚ್.ಡಿ.ಎಫ್.ಸಿ. ಬ್ಯಾಂಕ್ ಉದ್ಯೋಗಿ ಬಸವರಾಜ್(33) ಅವರ ಶವ ಪತ್ತೆಯಾಗಿದೆ. ಸೆ. 3ರಂದು ರಾತ್ರಿ ಹಳ್ಳ ದಾಟುತ್ತಿದ್ದಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದರು.

ಭಾರಿ ಮಳೆಯಿಂದ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಬಸವರಾಜ್ ಕೊಚ್ಚಿ ಹೋಗಿದ್ದರು. ಫತ್ತೆಪುರದಿಂದ ಸುಮಾರು ಒಂದೂವರೆ ಕಿಲೋಮೀಟರ್ ದೂರದಲ್ಲಿ ಅವರ ಮೃತ ದೇಹ ಪತ್ತೆಯಾಗಿದೆ. ಎನ್.ಡಿ.ಆರ್.ಎಫ್., ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ನಿರಂತರ ಹುಡುಕಾಟ ನಡೆಸಿದಾಗ ಶವ ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೆಂಕಟಾಪುರ ನಿವಾಸಿಯಾಗಿರುವ ಬಸವರಾಜ್ ರಾಯಚೂರಿನ HDFC ಬ್ಯಾಂಕ್ ಶಾಖೆಯಲ್ಲಿ ಕಲೆಕ್ಷನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುವಾಗ ಅವಘಡ ನಡೆದಿತ್ತು. ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular