HomeKarnatakaಖಾಸಗಿ ಕಂಪನಿಗಳಲ್ಲಿ ಉದ್ಯೋಗ: ಆಸಕ್ತರಿಗೆ ಇಲ್ಲಿದೆ ಮಾಹಿತಿ

ಖಾಸಗಿ ಕಂಪನಿಗಳಲ್ಲಿ ಉದ್ಯೋಗ: ಆಸಕ್ತರಿಗೆ ಇಲ್ಲಿದೆ ಮಾಹಿತಿ

ರಾಯಚೂರು: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಗಸ್ಟ್ 25 ರಂದು ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನೇರ ಸಂದರ್ಶನ ಆಯೋಜಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಕೋರಲಾಗಿದೆ.

ನೇರ ಸಂದರ್ಶನದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರವಾಗಿ ಭರ್ತಿ ಮಾಡಿಕೊಳ್ಳಲಿದ್ದಾರೆ.

ಅರ್ಹತೆಗಳು: ಎಲ್ಲಾ ಪದವೀಧರ ಆಸಕ್ತ 18 ರಿಂದ 28 ವರ್ಷಗಳ ವರೆಗಿನ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳು ಮತ್ತು ತಮ್ಮ ಬಯೋಡೆಟಾ, ಆಧಾರ್ ಕಾರ್ಡ್ ಪ್ರತಿ, ಭಾವಚಿತ್ರಗನ್ನು ಸಲ್ಲಿಸಬೇಕು. ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ, ಬದಲಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಬಾಲಾಜಿ ಕಾಂಪ್ಲೆಕ್ಸ್, ನೆಲ ಮಹಡಿ, ಗೂಡ್ ಶೆಡ್ ರಸ್ತೆ, ಸ್ಟೇಷನ್ ಏರಿಯಾ, ರಾಯಚೂರು ಹಾಗೂ ದೂರವಾಣಿ ಸಂಖ್ಯೆ 08532-231684, 9008211750, 8197930236ಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ನವೀನಕುಮಾರ ಸಂಗೇಪಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular