ಒಂದೇ ಕುಟುಂಬದ 7 ಜನರು ಇದ್ದಕ್ಕಿದ್ದಂತೆ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ರಾಯಚೂರು: ಒಂದೇ ಕುಟುಂಬದ 7 ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಅಮೀನಗಡ ಗ್ರಾಮದಲ್ಲಿ ನಡೆದಿದೆ.

ರೊಟ್ಟಿ ಊಟ ಮಾಡಿದ ಬಳಿಕ ಕುಟುಂಬದ 7 ಜನರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಫುಡ್ ಪಾಯಿಸನ್ ನಿಂದ ಅನಾರೋಗ್ಯಕ್ಕೀಡಾಗಿರುವ ಶಂಕೆ ವ್ಯಕ್ತವಾಗಿದೆ. 7 ಜನರು ವಾಂತಿ ಭೇದಿಯಿಂದ ಬಳಲುತ್ತಿದ್ದು, ಅಸ್ವಸ್ಥರನ್ನು ಲಿಂಗಸಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read