HomeKarnatakaಗುಂಪು ಹಲ್ಲೆ ನಡೆಸಿ ವ್ಯಕ್ತಿಯ ಬರ್ಬರ ಹತ್ಯೆ

ಗುಂಪು ಹಲ್ಲೆ ನಡೆಸಿ ವ್ಯಕ್ತಿಯ ಬರ್ಬರ ಹತ್ಯೆ

ರಾಯಚೂರು: ಏಳು ಜನರ ಗುಂಪು ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸೊಸೈಟಿ ಕ್ಯಾಂಪ್ ಬಳಿ ನಡೆದಿದೆ.

41 ವರ್ಷದ ಕ್ಯಾಂಪ್ ನಿವಾಸಿ ರಾಜಪ್ಪ ಕೊಲೆಯಾದ ವ್ಯಕ್ತಿ. ಅದೇ ಕ್ಯಾಂಪ್ ನ 7 ಜನರು ಗಲಾಟೆ ಮಾಡೊ ರಾಜಪ್ಪ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಗಲಾಟೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಾಜಪ್ಪನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕವಿತಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular