ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಮೊಹರಂ ಆಚರಣೆ ವೇಳೆ ದುರಂತವೊಂದು ಸಂಭವಿಸಿದೆ. ಬೆಂಕಿಯಲ್ಲಿ ಬಿದ್ದು ವ್ಯಕ್ತಿಯೊಬ್ಬರು ಬೆಂದುಹೋದ ಘಟನೆ ನಡೆದಿದೆ.
ರಾಯಚೂರಿನ ಜಿಲ್ಲೆಯ ಲಿಂಗಸಗೂರು ತಾಲೂಕಿನ ಯರಗುಂಟಿಯಲ್ಲಿ ಅಲಾವಿ ಕುಣಿಯಲ್ಲಿ ಬಿದ್ದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಯರಗುಂಟಿ ಗ್ರಾಮದ ಹನುಮಂತ (45) ಗಾಯಾಳು. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ರಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ಮುಂದುವರೆದಿದೆ. ಲಿಂಗಸಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.