HomeKarnatakaBIG NEWS: ಹಲ್ಲೆಗೊಳಗಾದ ವ್ಯಕ್ತಿ ಸಾವು: PSI ಹಾಗೂ CPI ಸಸ್ಪೆಂಡ್

BIG NEWS: ಹಲ್ಲೆಗೊಳಗಾದ ವ್ಯಕ್ತಿ ಸಾವು: PSI ಹಾಗೂ CPI ಸಸ್ಪೆಂಡ್

ರಾಯಚೂರು: ವಿಚಾರಣೆಗೆ ಕರೆತಂದಿದ್ದ ವ್ಯಕ್ತಿ ಹಲ್ಲೆಗೊಳಗಾಗಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಪಶ್ಚಿಮ ಪೊಲೀಸ್ ಠಾಣೆಯ ಪಿಎಸ್ ಐ ಮತ್ತು ಸಿಪಿಐ ಇಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಬಳ್ಳಾರಿ ವಲಯದ ಡಿಐಜಿಪಿ ಲೋಕೇಶ್ ಕುಮಾರ್ ಪಿಎಸ್ ಐ ಮಂಜುನಾಥ್ ಹಾಗೂ ಸಿಪಿಐ ನಾಗರಾಜ್ ಮೇಕಾ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಕೌಟುಂಬಿಕ ಕಲಹ ಪ್ರಕರಣದಲ್ಲಿ ವಿರೇಶ್ ಎಂಬುವವರನ್ನು ಮಹಿಳಾ ಠಾಗೆ ಹಾಗೂ ಪಶ್ಚಿಮ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಮಾರಣಂತಿಕ ಹಲ್ಲೆಗೊಳಗಾದ ವಿರೇಶ್ ಸಾವನ್ನಪ್ಪಿದ್ದರು. ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಪಿಎಸ್ ಐ ಹಾಗೂ ಸಿಪಿಐ ಇಬ್ಬರನ್ನು ಸಸ್ಪೆಂಡ್ ಮಾಡಿ ತನಿಖೆಗೆ ಆದೇಶಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular