ರಾಯಚೂರು: ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಅಟ ನಡೆಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರು ನಗರದ ಗಂಗಾನಿವಾಸ ರಸ್ತೆಯಲ್ಲಿ ಬೃಹತ್ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಕಟ್ಟಡದ ಮೇಲೆ ನಿಂತಿದ್ದ ಕಿಡಿಗೇಡಿಗಳು ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಮೆರವಣಿಗೆಯಲ್ಲಿ ಸಾಗುತ್ತಿದ್ದ ವಿನಯ್ ಹಾಗೂ ಗಣೇಶ್ ಎಂಬುವವರಿಗೆ ಗಾಯಗಳಾಗಿವೆ. ಗಾಯಾಳುಗಳು ಮಂಗಳವಾರಪೇಟೆ ನಿವಾಸಿಗಳು. ಹಳೇದ್ವೇಶದ ಹಿನ್ನೆಲೆಯಲ್ಲಿ ಕಲ್ಲು ತೂರಾಟ ನಡೆಸಲಾಗಿದೆ ಎಂದು ತಿಳಿದುಬಂದಿದೆ. ತಮ್ಮ ಏರಿಯಾದಲ್ಲಿ ಮೆರವಣಿಗೆ ನಡೆಸಿದ್ದಕ್ಕೆ ಕಲ್ಲು ತೂರಾಟ ನಡೆಸಿದ್ದು, ಮೊಬೈಲ್ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ.