HomeKarnatakaಅನುಮಾನಾಸ್ಪದವಾಗಿ ವ್ಯಕ್ತಿ ಸಾವು: ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಗ್ರಾಮಸ್ಥರಿಂದ ಹಲ್ಲೆ

ಅನುಮಾನಾಸ್ಪದವಾಗಿ ವ್ಯಕ್ತಿ ಸಾವು: ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಗ್ರಾಮಸ್ಥರಿಂದ ಹಲ್ಲೆ

ರಾಯಚೂರು: ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ನಡೆದಿದ್ದು, ಗ್ರಾಮಸ್ಥರು ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ.

ರಂಗಪ್ಪ (45) ಎಂಬಾತ ಮೂರ್ಛೆ ರೋಗದಿಂದ ಬಿದ್ದು ಸಾವನ್ನಪ್ಪಿದ್ದರು. ಅದೇ ಗ್ರಾಮದ ದಂಡಮ್ಮ ಎಂಬ ಮಹಿಳೆಯೊಂದಿಗೆ ರಂಗಪ್ಪ ಸಲುಗೆಯಿಂದ ಇದ್ದ. ಆಕೆಯೊಂದಿಗೆ ಹೋಗಿದ್ದ ಸಂದರ್ಭದಲ್ಲೇ ರಂಗಪ್ಪ ಬಿದ್ದು ಸಾವನ್ನಪ್ಪಿದ್ದಾರೆ.

ಈ ಘಟನೆಯಿಂದ ಗ್ರಾಮಸ್ಥರು ಹಾಗೂ ರಂಗಪ್ಪನ ಸಂಬಂಧಿಕರು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ. ನೂರಾರು ಜನರು ಹಲ್ಲೆ ನಡೆಸುತ್ತಿರುವುದನ್ನು ನಿಂತು ನೋಡಿದ್ದಾರೆ ಹೊರತು ಯಾರೊಬ್ಬರೂ ರಕ್ಷಣೆಗೆ ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಜಾಲಹಳ್ಳಿ ಠಾಣೆ ಪೊಲೀಸರು ಮಹಿಳೆಯನ್ನು ರಕ್ಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular