HomeUncategorizedಭೀಕರ ಅಪಘಾತ: ವಿದ್ಯಾರ್ಥಿನಿಯ ಮೇಲೆ ಹರಿದು ಹೋದ ಮಹೀಂದ್ರಾ ಥಾರ್; ಸ್ಥಳದಲ್ಲೇ ಸಾವು

ಭೀಕರ ಅಪಘಾತ: ವಿದ್ಯಾರ್ಥಿನಿಯ ಮೇಲೆ ಹರಿದು ಹೋದ ಮಹೀಂದ್ರಾ ಥಾರ್; ಸ್ಥಳದಲ್ಲೇ ಸಾವು

ರಾಯಚೂರು: ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ಸಿಂಧನೂರಿನ ಅರಗಿನಮರ ಕ್ಯಾಂಪ್ ಬಳಿ ನಾಲ್ವರು ವಿದ್ಯಾರ್ಥಿನಿಯರು ರಸ್ತೆಯಲ್ಲಿ ಬರುತ್ತಿದ್ದ ವೇಳೆ ಮಹೀಂದ್ರಾ ಥಾರ್ ಚಾಲಕ ವಾಹನ ರಿವರ್ಸ್ ತೆಗೆದುಕೊಳ್ಳುತ್ತಿದ್ದ ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ವಾಹನ ವಿದ್ಯಾರ್ಥಿನಿಯರ ಮೇಲೆ ಹರಿದಿದೆ. ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾಅವನ್ನಪ್ಪಿದ್ದಾಳೆ. ಮೂವರ ಸ್ಥಿತಿ ಗಂಭೀರವಾಗಿದೆ.

ವಿದ್ಯಾರ್ಥಿನಿ ಭೂಮಿಕಾ (17) ಮೃತ ದುರ್ದೈವಿ. ಮೇಘನಾ, ಮಹೇಶ್ವರಿ, ಜಹೀದಾ ಎಂಬ ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಲಕನ ಅಜಾಗೂರೂಕತೆಯೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಸಿಂಧನೂರು ಸಂಚಾರ ಠಾಣೆ ಪೊಲೀಸರು ವಾಹನ ಚಾಲಕನನ್ನ ವಶಕ್ಕೆ ಪಡೆದಿದ್ದಾರೆ. ಗಾಯಗೊಂಡ ವಿದ್ಯಾರ್ಥಿನಿಯರಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular