ರಾಯಚೂರು: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಕೆ.ಕೆ.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಆಟೋದಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಕೆ.ಕೆ.ಆರ್.ಟಿ.ಸಿ ಬಸ್ ಹಾಗೂ ಆಟೋ ನಡುವೆ ಅಪಘಾತ ಸಂಭವಿಸಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕರಿಗುಡ್ಡ ಪ್ರದೇಶದಲ್ಲಿ ನಡೆದಿದೆ.
ಅಪಘಾತದಲ್ಲಿ ಸ್ಥಳದಲ್ಲೇ ಮಲ್ಲಪ್ಪ (60) ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೋನಮ್ಮ (35) ಅವರನ್ನು ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

