HomeKarnatakaBREAKING: ರಾಯಚೂರಿನಲ್ಲಿ ಬಿಸಿಲಿನ ತಾಪಮಾನಕ್ಕೆ ಕುಸಿದು ಬಿದ್ದು ವ್ಯಕ್ತಿ ಸಾವು

BREAKING: ರಾಯಚೂರಿನಲ್ಲಿ ಬಿಸಿಲಿನ ತಾಪಮಾನಕ್ಕೆ ಕುಸಿದು ಬಿದ್ದು ವ್ಯಕ್ತಿ ಸಾವು

ರಾಯಚೂರು: ರಾಜ್ಯಾದ್ಯಂತ ರಣ ಬಿಸಿಲು, ಬಿಸಿ ಗಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾವು-ನೋವುಗಳು ಸಂಭವಿಸುತ್ತಿವೆ. ಬಿಸಿಲ ಝಳಕ್ಕೆ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ರಾಯಚೂರು ತಾಲೂಕಿನ ಯಾಪಲದಿನ್ನಿ ಗ್ರಾಮದಲ್ಲಿ ಈ ದುರಂತ ಅಸ್ಂಭವಿಸಿದೆ. ಉದ್ಯೋಗ ಖಾತ್ರಿ ಕೆಸಕ್ಕೆ ಹೋಗಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ತಾಪಮಾನ ಏರಿಕೆಯಿಂದ ಅಸ್ವಸ್ಥರಾಗಿ ಸಾವನ್ನಪ್ಪಿದ್ದಾಗಿ ಕುಟುಖ್ಬದವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುಸೇನಪ್ಪ ಮಡಿವಾಳ (45) ಮೃತ ದುರ್ದೈವಿ. ನಿನ್ನೆ ಉದ್ಯೋಗಖಾತ್ರಿ ಯೋಜನೆಯಡಿ ಕೆಲಸಕ್ಕೆ ಹೋಗಿದ್ದರು. ಕೆಲ ಸಮಯ ಕೆಲಸ ಮಾಡಿದ ಬಳಿಕ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆಯೇ ಹುಸೇನಪ್ಪ ಕೊನೆಯುಸಿರೆಳೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular