HomeKarnatakaರಾಯಚೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗುಂಪು ಘರ್ಷಣೆ; ಲಘು ಲಾಠಿ ಪ್ರಹಾರ

ರಾಯಚೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗುಂಪು ಘರ್ಷಣೆ; ಲಘು ಲಾಠಿ ಪ್ರಹಾರ

ರಾಯಚೂರು: ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಗಲಭೆ ಬೆನ್ನಲ್ಲೇ ಅತ್ತ ರಾಯಚೂರಿನಲ್ಲಿಯೂ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗುಂಪು ಘರ್ಷಣೆ ನಡೆದಿರುವ ಘಟನೆ ನಡೆದಿದೆ.

ರಾಯಚೂರಿನ ತಿಮ್ಮಾಪುರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗುಂಪು ಘರ್ಷಣೆ ನಡೆದಿದೆ. ತಡರಾತ್ರಿಯಿಂದ ಬೆಳಿಗ್ಗೆವರೆಗೂ ಗಣೇಶ ಮೂರ್ತಿ ವಿಸರ್ಜನೆ ನಡೆದಿದ್ದು, ಮೆರವಣಿಗೆ ವೇಳೆ ಗಲಾಟೆಯಾಗಿದೆ. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಲಾಠಿ ಪ್ರಹಾರ ನಡೆಸಿ ಗುಂಪುಗಳನ್ನು ಚದುರಿಸಲಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular