HomeKarnatakaBREAKING NEWS: ಖಾಸಗಿ ಶಾಲೆ ವಿದ್ಯಾರ್ಥಿಗಳ ನಡುವೆ ಗಲಾಟೆ; ಹಲ್ಲೆ ನಡೆಸಲು ಮಾರಕಾಸ್ತ್ರಗಳೊಂದಿಗೆ ಬಂದ ಗ್ಯಾಂಗ್

BREAKING NEWS: ಖಾಸಗಿ ಶಾಲೆ ವಿದ್ಯಾರ್ಥಿಗಳ ನಡುವೆ ಗಲಾಟೆ; ಹಲ್ಲೆ ನಡೆಸಲು ಮಾರಕಾಸ್ತ್ರಗಳೊಂದಿಗೆ ಬಂದ ಗ್ಯಾಂಗ್

ರಾಯಚೂರು: ಹೊಸ ವರ್ಷಾಚರಣೆ ದಿನವೇ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದ್ದು, ಮಾರಕಾಸ್ತ್ರಗಳನ್ನು ತಂದು ಹಲ್ಲೆ ನಡೆಸಿರುವ ಘಟನೆ ರಾಯಚೂರಿನ ಖಾಸಗಿ ಶಾಲೆಯಲ್ಲಿ ನಡೆದಿದೆ.

ರಾಯಚೂರಿನ ಜ್ಯೋತಿ ಕಾಲೋನಿಯ ಶಾಲೆಯಲ್ಲಿ ಈ ಘಟನೆ ನಡೆದಿದೆ. 9ನೇ ತರಗತಿ ಹಾಗೂ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿದ್ದು, 9 ನೇ ತರಗತಿ ವಿದ್ಯಾರ್ಥಿಯನ್ನು ಹೊಡೆಯಲು 7ನೇ ತರಗತಿ ವಿದ್ಯಾರ್ಥಿಗಳು ತಮ್ಮ ಏರಿಯಾದ ಹುಡುಗರ ಗುಂಪನ್ನು ಕರೆಸಿದ್ದಾನೆ.

ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಲು ಡ್ರ್ಯಾಗರ್, ಚಾಕು, ಹಕ್ಕಿಗೆ ಹೊಡೆಯುವ ಗನ್ ಸೇರಿದಂತೆ ಮಾರಕಾಸ್ತ್ರಗಳೊಂದಿಗೆ ಬಂದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಮಾರಕಾಸ್ತ್ರಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾರ್ಥಿಗಳ ಮನ:ಸ್ಥಿತಿಗೆ ಪೋಷಕರು ಹಾಗೂ ಸಾರ್ವಜನಿಕರು ಕಂಗಾಲಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular