HomeKarnatakaಪ್ರೇಮ ವೈಫಲ್ಯಕ್ಕೆ ಮನನೊಂದ ಯುವಕ ಆತ್ಮಹತ್ಯೆ

ಪ್ರೇಮ ವೈಫಲ್ಯಕ್ಕೆ ಮನನೊಂದ ಯುವಕ ಆತ್ಮಹತ್ಯೆ

ರಾಯಚೂರು: ಅತ್ತಿಗೆಯ ತಂಗಿಯನ್ನೇ ಪ್ರೀತಿಸಿದ್ದ ಯುವಕನೊಬ್ಬ, ಮದುವೆಗೆ ಒಪ್ಪಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕನಸಾವಿ ಗ್ರಾಮದಲ್ಲಿ ನಡೆದಿದೆ.

22 ವರ್ಷದ ಸಂತೋಷ್ ಆತ್ಮಹತ್ಯೆಗೆ ಶರಣಾದ ಯುವಕ. ಸಂತೋಷ್, ತನ್ನ ಅತ್ತಿಗೆಯ ತಂಗಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಹಾಗೂ ಮನೆಯವರು ಮದುವೆಗೆ ಒಪ್ಪಿರಲಿಲ್ಲ. ಇದರಿಂದ ನೊಂದ ಯುವಕ ವಾಟ್ಸಪ್ ನಲ್ಲಿ ನಾನು ಒಬ್ಬ ಹುಚ್ಚು ಪ್ರೇಮಿ. ಸತ್ತರು ಪ್ರೀತಿಗಾಗಿ ಸಾವು ಎಂದು ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮನೆಯಲ್ಲಿಯೇ ಫ್ಯಾನ್ ಗೆ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಮುದಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular